
ನೆಲ್ಯಾಡಿ: ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯ(ನಿ) ಯ 9ನೇ ಶಾಖೆ ಸೆ.14ರಂದು ಬೆಳಗ್ಗೆ 10:30ಕ್ಕೆ ನೆಲ್ಯಾಡಿ ರಬ್ಬರ್ ಸೊಸೈಟಿ ಬಳಿ ಸೈಂಟ್ ಮೇರೀಸ್ ಕಾಂಪ್ಲೆಕ್ಸ್‌ನಲ್ಲಿ ಉದ್ಘಾಟನೆಗೊಳ್ಳಲಿದೆ ಹಾಗೂ ಈ ಸಂದರ್ಭದಲ್ಲಿ ತೆಂಗು ಕೊಯ್ಲುಗಾರರಿಗೆ ಉಚಿತ ವಿಮಾ ಯೋಜನೆ ನೋಂದಾವಣೆಯೂ ನಡೆಯಲಿದೆ. ಎಂದು ಸಂಘದ ಅಧ್ಯಕ್ಷರಾದ ಕುಸುಮಾಧರ್ ಎಸ್.ಕೆ.ಅವರು ತಿಳಿಸಿದ್ದಾರೆ.

ಬೆಳಾಲು ಆರಿಕೋಡಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಅವರು ದೀಪ ಪ್ರಜ್ವಲನೆ ಮಾಡಲಿದ್ದಾರೆ. ಉದನೆ ಸಂತ ಅಂತೋನೀಸ್ ವಿದ್ಯಾಸಂಸ್ಥೆಯ ಸಂಚಾಲಕರಾದ ರೆ.ಫಾ.ಹನಿ ಜೇಕಬ್‌ರವರು ಶಾಖೆಯ ಉದ್ಘಾಟನೆ ನೆರವೇರಿಸಲಿದ್ದಾರೆ. ಜಿ.ಪಂ.ಮಾಜಿ ಸದಸ್ಯರಾದ ಬಾಲಕೃಷ್ಣ ಬಾಣಜಾಲು, ಸರ್ವೋತ್ತಮ ಗೌಡ, ಕೌಕ್ರಾಡಿ ಗ್ರಾ.ಪಂ.ಅಧ್ಯಕ್ಷರಾದ ಲೋಕೇಶ್ ಬಾಣಜಾಲು, ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷರಾದ ಸಲಾಂ ಬಿಲಾಲ್‌ರವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕಲ್ಪಸಮೃದ್ಧಿ ಯೋಜನೆಯಡಿ ಠೇವಣಿಗಳಿಗೆ ಆಕರ್ಷಕ ಶೇ.12ರಷ್ಟು ಬಡ್ಡಿದರ ನೀಡಲಾಗುವುದು. ಈ ಯೋಜನೆ ಸೀಮಿತ ಅವಧಿಗೆ ಮಾತ್ರವಿದ್ದು ಸದುಪಯೋಗಪಡಿಸಿಕೊಳ್ಳುವಂತೆ ಸಂಘದ ಅಧ್ಯಕ್ಷರು ತಿಳಿಸಿದರು.



