ದ.ಕ.ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯ 9ನೇ ಶಾಖೆ ನೆಲ್ಯಾಡಿಯಲ್ಲಿ ಉದ್ಘಾಟನೆ; ತೆಂಗು ಕೊಯ್ಲುಗಾರರಿಗೆ ಉಚಿತ ವಿಮಾಯೋಜನೆ ನೋಂದಾವಣೆ ಕಾರ್ಯಕ್ರಮ

ಶೇರ್ ಮಾಡಿ

ನೆಲ್ಯಾಡಿ: ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯ(ನಿ) ಯ 9ನೇ ಶಾಖೆ ಸೆ.14ರಂದು ಬೆಳಗ್ಗೆ 10:30ಕ್ಕೆ ನೆಲ್ಯಾಡಿ ರಬ್ಬರ್ ಸೊಸೈಟಿ ಬಳಿ ಸೈಂಟ್ ಮೇರೀಸ್ ಕಾಂಪ್ಲೆಕ್ಸ್‌ನಲ್ಲಿ ಉದನೆ ಸಂತ ಅಂತೋನೀಸ್ ವಿದ್ಯಾಸಂಸ್ಥೆಯ ಸಂಚಾಲಕರಾದ ರೆ.ಫಾ.ಹನಿ ಜೇಕಬ್‌ರವರು ಶಾಖೆಯ ಕಚೇರಿಯನ್ನು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ಸಭಾ ಕಾರ್ಯಕ್ರಮವನ್ನು ಬೆಳಾಲು ಆರಿಕೋಡಿ ಕ್ಷೇತ್ರದ ಧರ್ಮದರ್ಶಿ ಹರೀಶ್‌ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಜಿ.ಪಂ.ಮಾಜಿ ಸದಸ್ಯರಾದ ಬಾಲಕೃಷ್ಣ ಬಾಣಜಾಲು, ಕೌಕ್ರಾಡಿ ಗ್ರಾ.ಪಂ.ಅಧ್ಯಕ್ಷರಾದ ಲೋಕೇಶ್ ಬಾಣಜಾಲು, ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷರಾದ ಸಲಾಂ ಬಿಲಾಲ್‌, ಸಂಘದ ಅಧ್ಯಕ್ಷರಾದ ಕುಸುಮಾಧರ್ ಎಸ್.ಕೆ., ಸಂಘದ ಉಪಾಧ್ಯಕ್ಷರಾದ ಗಿರಿಧರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚೇತನ್ ಎ ರವರು ಉಪಸ್ಥಿತರಿದ್ದರು.

ನವ್ಯ ಸ್ವಾಗತಿಸಿದರು, ಚೇತನ್ ಎ ಪ್ರಾಸ್ತಾವಿಕವಾಗಿ ಮಾತನಾಡಿದರು. ಅರ್ಪಣಾ ವಂದಿಸಿದರು. ಡಾ. ರಾಜೇಶ್ ಬೆಜ್ಜಂಗಳ ನಿರೂಪಿಸಿದರು.

Leave a Reply

error: Content is protected !!