
7 ತಿಂಗಳ ಬಳಿಕ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಜೊತೆಗೆ ಐಪಿಎಸ್ ಅಧಿಕಾರಿ ಡಿ.ರೂಪಾಗೂ ಸರ್ಕಾರ ಹುದ್ದೆ ನಿಯೋಜನೆ ಮಾಡಿದೆ. ಆಂತರಿಕ ಭದ್ರತಾ ವಿಭಾಗದ ಐಜಿಯಾಗಿ ರೂಪಾರನ್ನ ನಿಯೋಜಿಸಲಾಗಿದೆ.
ರೋಹಿಣಿ ಸಿಂಧೂರಿ ಮತ್ತು ರೂಪಾ ಮೌದ್ಗಿಲ್ ಪರಸ್ಪರ ಕಿತ್ತಾಡಿಕೊಂಡಿದ್ದರು. ಆಗ ರಾಜ್ಯ ಸರ್ಕಾರ ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಆದರೆ ಯಾವುದೇ ಹುದ್ದೆಯನ್ನು ನೀಡಿರಲಿಲ್ಲ. ಇದಾದ 7 ತಿಂಗಳ ಬಳಿಕ ರೋಹಿಣಿ ಸಿಂಧೂರಿ ಅವರನ್ನು ಕರ್ನಾಟಕ ಗೆಜೆಟಿಯರ್ ಡಿಪಾರ್ಟ್‌ಮೆಂಟ್‌ನ ಮುಖ್ಯ ಸಂಪಾದಕರನ್ನಾಗಿ ನಿಯೋಜಿಸಲಾಗಿದೆ.
ರೋಹಿಣಿ ಸಿಂಧೂರಿ ಅವರಿಗೆ ಹುದ್ದೆ ನಿಯೋಜನೆಯಾದ ಬೆನ್ನಲ್ಲೇ ಡಿ.ರೂಪಾ ಅವರನ್ನು ಆಂತರಿಕ ಭದ್ರತಾ ವಿಭಾಗದ ಐಜಿಯಾಗಿ ನಿಯುಕ್ತಿಗೊಳಿಸಲಾಗಿದೆ.



