ನೆಲ್ಯಾಡಿ ವಿಶ್ವವಿದ್ಯಾನಿಲಯ ಕಾಲೇಜು: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಶೇರ್ ಮಾಡಿ

ನೆಲ್ಯಾಡಿ: ವಿಶ್ವವಿದ್ಯಾನಿಲಯ ಘಟಕ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ರಾಜ್ಯಶಾಸ್ತ್ರ ಸಂಘದ ವತಿಯಿಂದ ಇಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಯಿತು.

ದಿನಾಚರಣೆಯ ಪ್ರಯುಕ್ತ ಸಂವಿಧಾನದ ಪ್ರಸ್ತಾವನೆಯನ್ನು ಪ್ರತಿಜ್ಞಾವಿಧಿಯನ್ನಾಗಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡಲಾಯಿತು. ಕಾಲೇಜಿನ ರಾಜ್ಯಶಾಸ್ತ್ರದ ಉಪನ್ಯಾಸಕರಾದ ಸುರೇಶ್ ಕೆ ಅವರು ನಿರ್ವಹಿಸಿದರು.

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಮಹತ್ವ ಮತ್ತು ಆಶಯಗಳ ಬಗ್ಗೆ ಅಭಿಪ್ರಾಯಗಳನ್ನು ಹಂಚಿಕೊಂಡರು. ಇಂದು ವಿಶ್ವದಾಧ್ಯಂತ ಈ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಬಹುಮುಖ್ಯವಾಗಿ ಇಂದಿನ ಯುವಜನತೆಯು ಪ್ರಸ್ತುತ ಮತ್ತು ಭವಿಷ್ಯದ ಪ್ರಜಾಪ್ರಭುತ್ವದ ಪಾಲಕರಾಗಿದ್ದಾರೆ. ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವ, ಉತ್ತೇಜಿಸುವ ಮೂಲಕ ಮುಂದಿನ ಪೀಳಿಗೆಗೆ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಳಿಸಿ ಸಬಲೀಕರಣಗೊಳಿಸಬೇಕಿದೆ. ಈ ನಿಟ್ಟಿನಲ್ಲಿ ಸಂವಿಧಾನದ ಮೂಲ ಧ್ಯೇಯ ಆಶಯಗಳಿಗೆ ತಕ್ಕಂತೆ ನಿರ್ವಹಿಸಬೇಕಾದ ಪ್ರಜೆಗಳ ಕರ್ತವ್ಯಗಳನ್ನು ಬೆಳೆಸಿಕೊಳ್ಳುವುದು ನಮ್ಮೆಲ್ಲರ ಬದುಕಿನ ಮುಖ್ಯ ಉದ್ದೇಶವಾಗಬೇಕು ಎಂದರು.

ಪ್ರತಿಜ್ಞಾವಿಧಿ ಸ್ವೀಕಾರ ಮತ್ತು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕ ವೃಂದ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರು  ಹಾಜರಿದ್ದರು.

Leave a Reply

error: Content is protected !!