ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2023-24ನೇ ಸಾಲಿನ ಮೆಟ್ರಿಕ್ ನಂತರ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ ವರ್ಗದವರಿಗೆ ರೂ.2.50 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ಮತ್ತು ಇತರೆ ಹಿಂದುಳಿದ ವರ್ಗ ಹಾಗೂ ಇತರರಿಗೆ ರೂ.1.00 ಲಕ್ಷ ಹೊಂದಿರಬೇಕು.
ಆಸಕ್ತ ವಿದ್ಯಾರ್ಥಿಗಳು ವೆಬ್ ಸೈಟ್ https://shp.karnataka,gov.in ನಲ್ಲಿ ಅಕ್ಟೋಬರ್ 11ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು. ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ ಸೈಟ್ https://www.bcwd.karnataka.gov.in ನ್ನು ನೋಡಬಹುದು.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ [email protected] ಗೆ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ ಮತ್ತು ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹದು.
ಹೆಚ್ಚಿನ ಮಾಹಿತಿಗಾಗಿ:
ಉಪನಿರ್ದೇಶಕರ ಕಾರ್ಯಾಲಯ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ವಿ.ವಿ.ಗೋಪುರ, ಡಾ.ಬಿ.ಆರ್.ಅಂಬೇಡ್ಕರ್ ವೀದಿ, ಬೆಂಗಳೂರು ನಗರ ಜಿಲ್ಲೆ ಅಥವಾ ದೂರವಾಣಿ ಸಂಖ್ಯೆ: 080- 22867628 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.