ಮಂಗಳೂರು ಗುಪ್ತಚರ ಇಲಾಖಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಶೇರ್ ಮಾಡಿ

ಕರ್ತವ್ಯದಲ್ಲಿದ್ದ ಗುಪ್ತಚರ ಇಲಾಖಾ ಸಿಬ್ಬಂದಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉರ್ವ ಗುಪ್ತಚರ ಇಲಾಖಾ ಕಚೇರಿಯಲ್ಲಿ ಇಂದು ನಡೆದಿದೆ.

ಉರ್ವ ಮಾರಿಗುಡಿ ನಿವಾಸಿ ರಾಜೇಶ್ ಬಿ.ಯು (45) ಮೃತರು. ಇಂದು ಮಧ್ಯಾಹ್ನ ವೇಳೆ ಗುಪ್ತಚರ ಇಲಾಖಾ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ರೆಸ್ಟ್ ರೂಮಿಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಂತೆ ಕುಸಿದುಬಿದ್ದಿದ್ದಾರೆ.

1993 ನೇ ಬ್ಯಾಚ್ ನವರಾಗಿರುವ ರಾಜೇಶ್, ಇನ್ನೂ ಏಳು ವರ್ಷಗಳ ಕಾಲ ಕರ್ತ್ಯವ್ಯ ನಿರ್ವಹಿಸಬೇಕಿತ್ತು. ಸುರತ್ಕಲ್ ಹಾಗೂ ಪಣಂಬೂರು ಪೊಲೀಸ್ ಠಾಣೆಯ ಸಿಬಂದಿಯೂ ಆಗಿದ್ದರು.

Leave a Reply

error: Content is protected !!