ರಿಕ್ಷಾದಲ್ಲಿ ಗಾಂಜಾ ಸಾಗಾಟ: ಸುಳ್ಯ ನಿವಾಸಿ ಪೊಲೀಸರ ವಶಕ್ಕೆ

ಶೇರ್ ಮಾಡಿ

ರಿಕ್ಷಾವೊಂದರಲ್ಲಿ ಗಾಂಜಾ ಸಾಗಿಸುತ್ತಿರುವುದನ್ನು ವಿಟ್ಲ ಪೊಲೀಸರು ಪತ್ತೆಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸುಳ್ಯ ಕಸಬಾ ಗ್ರಾಮದ ನಿವಾಸಿ ಎನ್ ಎಂ ಮಹಮ್ಮದ್ ಕಲಂದರ್ ಶಾ (36) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ KA-21-B-7248 ಅಟೋರಿಕ್ಷಾದಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿಯ ಆಧಾರದಲ್ಲಿ ಪತ್ತೆ ಹಚ್ಚಿದ್ದಾರೆ.

ರಿಕ್ಷಾದಲ್ಲಿ 6.110 ಕೆ ಜಿ ತೂಕದ ಗಾಂಜಾ ಪತ್ತೆಯಾಗಿದ್ದು ಅಂದಾಜು ಮೌಲ್ಯ ರೂ.1,35,000/-, ಎರಡು ಮೊಬೈಲ್ ಫೊನ್, 900ರೂ ನಗದು, ಚಾಲಕನ ಚಾಲನಾ ಪರವಾನಿಗೆ ಹಾಗೂ ರೂ.1,60,000/- ಅಂದಾಜು ಮೌಲ್ಯದ ಅಟೋರಿಕ್ಷಾವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

error: Content is protected !!