ಖಾಸಗಿ ಬಸ್ ಅತಿವೇಗಕ್ಕೆ ಇಬ್ಬರು ಯುವಕರು ಗಂಭೀರ! ವಿಡಿಯೋ ವೈರಲ್

ಶೇರ್ ಮಾಡಿ

ಖಾಸಗಿ ಎಕ್ಸ್ ಪ್ರೆಸ್ ಬಸ್ಸನ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹೊಸಬೆಟ್ಟು ಎಂಬಲ್ಲಿ ರವಿವಾರ ನಡೆದಿದೆ.

ಗಾಯಗೊಂಡವರನ್ನು ಹಳೆಯಂಗಡಿ ಇಂದಿರಾ ನಗರ ನಿವಾಸಿ ಪುತ್ತುಮೋನು ಎಂಬವರ ಮಗ ಮುಹಮ್ಮದ್ ಸಾಹಿಲ್ ಮತ್ತು ಪಕ್ಷಿಕೆರೆ ಹೊಸಕಾಡು ನಿವಾಸಿ ಇಮ್ಮಿಯಾಝ್ ಎಂಬವರ ಮಗ ಅರಾಫತ್ ಎಂದು ತಿಳಿದು ಬಂದಿದೆ.

ಘಟನೆಯ ವಿವರ
ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಎಂಬಲ್ಲಿ ಮಂಗಳೂರಿಂದ ಉಡುಪಿ ಕಡೆಗೆ ಬರುತ್ತಿದ್ದ ಎಕ್ಸ್ ಪ್ರೆಸ್ ಬಸ್ ವಿರುದ್ಧ ದಿಕ್ಕಿನಲ್ಲಿ ಸಂಚರಿಸಿ ರಸ್ತೆ ಬದಿ ಬೈಕ್ ನೊಂದಿಗೆ ನಿಂತಿದ್ದ ಯುವಕರಿಗೆ ಡಿಕ್ಕಿ ಹೊಡೆಯಿತೆನ್ನಲಾಗಿದೆ.

ಘಟನೆಯಲ್ಲಿ ಇಬ್ಬರೂ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದೇ ಸಂಸ್ಥೆಗೆ ಸೇರಿದ ಬಸ್ಸಿನ ಚಾಲಕ ನಿರ್ವಾಹಕ ಇತ್ತೀಚಿಗೆ ಹೊಸಬೆಟ್ಟು ಸಮೀಪ ಬೈಕ್ ಸವಾರರ ಜೊತೆಗೆ ಹೊಡೆದಾಟಕ್ಕಿಳಿದಿದ್ದು ವೈರಲ್ ಆಗಿತ್ತು. ಪೊಲೀಸ್ ಇಲಾಖೆ ಈ ಬಸ್ಸಿನ ಸಿಬ್ಬಂದಿಯ ಆಟಾಟೋಪ ನಿಲ್ಲಿಸಲು ವಿಫಲವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

Leave a Reply

error: Content is protected !!