ಆರೆಸ್ಸೆಸ್‌, ಬಿಜೆಪಿ ಕಾರ್ಯಕರ್ತ ಆಸ್ಪತ್ರೆಯಲ್ಲೇ ಕುಸಿದು ಬಿದ್ದು ಸಾವು

ಶೇರ್ ಮಾಡಿ

ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು, ಔಷಧಿಗೆಂದು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಆಗಮಿಸಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಸೋಮವಾರ ನಡೆದಿದೆ.

ಬಡಗಬೆಳ್ಳೂರು ಶಾಲಾ ಬಳಿ ನಿವಾಸಿ, ಬಿಜೆಪಿಯ ಮಹಾ ಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರಕಾಶ್‌ ಬೆಳ್ಳೂರು(42) ಮೃತರು. ಅವರು ಅವಿವಾಹಿತರಾಗಿದ್ದರು. ಜ್ವರ ಗುಣಮುಖವಾಗದ ಹಿನ್ನೆಲೆಯಲ್ಲಿ ಔಷಧಿಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಆಗಮಿಸಿದ್ದು, ವೈದ್ಯರು ಪರೀಕ್ಷೆ ಮಾಡುವ ಮುನ್ನವೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಪರೀಕ್ಷೆಗೆ ಮುನ್ನವೇ ಅವರು ಮೃತಪಟ್ಟಿರುವ ಕಾರಣದಿಂದ ಸ್ಪಷ್ಟವಾಗಿ ಯಾವ ಖಾಯಿಲೆಯಿಂದ ಮೃತಪಟ್ಟಿದ್ದಾರೆ ಎಂಬುದು ತಿಳಿದುಬಂದಿಲ್ಲ.

ಆರೆಸ್ಸೆಸ್‌, ಬಿಜೆಪಿ ಕಾರ್ಯಕರ್ತರಾಗಿದ್ದ ಅವರು ಪಕ್ಷದಲ್ಲಿ ವಿವಿಧ ಜವಾಬ್ದಾರಿ ನಿರ್ವಹಿಸಿ ಯುವನಾಯಕರಾಗಿ ಬಂಟ್ವಾಳ ಕ್ಷೇತ್ರದಲ್ಲಿ ಚಿರಪರಿಚಿತರಾಗಿದ್ದರು. ಜತೆಗೆ ಇತರ ಸಂಘಟನೆ, ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಸೇರಿದಂತೆ ಹಲವು ಗಣ್ಯರು ಮೃತರ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದ್ದಾರೆ.

Leave a Reply

error: Content is protected !!