ಒಡಿಶಾದಲ್ಲಿ ಸಿಕ್ಕಿಬಿದ್ದ ಅಭಿನವ ಹಾಲಶ್ರೀ

ಶೇರ್ ಮಾಡಿ

ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ವಂಚಿಸಿ ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಗ್ಯಾಂಗ್‍ನ ಎ3 ಆರೋಪಿ ಅಭಿನವ ಹಾಲಶ್ರೀಯನ್ನು ಬಂಧಿಸಲಾಗಿದೆ.

ಪ್ರಕರಣ ದಾಖಲಾದಾಗಿನಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಇದೀಗ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದು, ಬೆಂಗಳೂರಿಗೆ ಕರೆತರಲಾಗುತ್ತಿದೆ. ಆರೋಪಿ ಬಂಧನಕ್ಕೆ ಸಿಸಿಬಿ ಅಧಿಕಾರಿಗಳು ತೀವ್ರ ಹುಡುಕಾಟ ನಡೆಸುತ್ತಿದ್ದರು. ಹೈದರಾಬಾದ್‍ನಲ್ಲಿ ಅಡಗಿದ್ದ ಮಾಹಿತಿ ಮೇರೆಗೆ ಅಲ್ಲಿಗೂ ಅಧಿಕಾರಿಗಳ ತಂಡವನ್ನು ಕಳುಹಿಸಲಾಗಿತ್ತು. ಅಲ್ಲದೇ ಸ್ವಾಮೀಜಿ ಆಪ್ತರ ತೀವ್ರ ವಿಚಾರಣೆ ಕೂಡ ನಡೆಸಲಾಗಿತ್ತು. ಇದೀಗ ಒಡಿಸ್ಸಾದ ಹೋಟೆಲ್ ಒಂದರಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

ಆರೋಪಿ ಹಾಲಶ್ರೀ ಫೋನ್ ಬಳಸದೆ ಪದೇ ಪದೇ ಇರುವ ಸ್ಥಳ ಬದಲಾಯಿಸುತ್ತಿದ್ದು, ಬಂಧನಕ್ಕೆ ಸ್ವಲ್ಪ ಕಷ್ಟವಾಗಿತ್ತು. ಆದರೆ ಇದೀಗ ಆರೋಪಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿರುವುದು ಖಚಿತವಾಗಿದೆ. ಸ್ವಾಮೀಜಿಗಾಗಿ ಪ್ರತ್ಯೇಕವಾಗಿ ಎರಡು ತಂಡಗಳು ಕಾರ್ಯಚರಣೆ ನಡೆಸುತ್ತಿದ್ದವು.

Leave a Reply

error: Content is protected !!