ಅಂತ್ಯಕ್ರಿಯೆಗೆ ಜಾಗವಿಲ್ಲದೆ ನಡು ರಸ್ತೆಯಲ್ಲೇ ಶವ ಸಂಸ್ಕಾರ ಮಾಡಿದ ಕುಟುಂಬಸ್ಥರು..!!

ಶೇರ್ ಮಾಡಿ

ಅಂತ್ಯಕ್ರಿಯೆಗೆ ಜಾಗವಿಲ್ಲದೆ ಕುಟುಂಬಸ್ಥರು ನಡು ರಸ್ತೆಯಲ್ಲೇ ಶವ ಸಂಸ್ಕಾರ ಮಾಡಿದ ಘಟನೆ ಜಿಲ್ಲೆಯ ಪಾವಗಡ ತಾಲೂಕಿನ ಕ್ಯಾತಗಾನಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಈರಣ ಎಂಬುವರು ಅನಾರೋಗ್ಯ ಸಮಸ್ಯೆಯಿಂದ ಸಾವನ್ನಪ್ಪಿದ್ದರು. ಗ್ರಾಮದ ಹೊರವಲಯದ ರಾಜಕಾಲುವೆ ಪಕ್ಕದ ಸರ್ಕಾರಿ ಜಾಗದಲ್ಲಿ ಅಂತ್ಯಕ್ರಿಯೆ ನೆರವೇರಿಸಲು ಕುಟುಂಬಸ್ಥರು ಮುಂದಾಗಿದ್ದರು. ಈ ವೇಳೆ ಈ ಜಾಗ ನಮ್ಮದು ಎಂದು ಪಕ್ಕದ ಜಮೀನು ಮಾಲೀಕರು ಜಗಳ ಮಾಡಿದ್ದಾರೆ. ಕೊನೆಗೆ ವಿಧಿ ಇಲ್ಲದೆ ಕುಟುಂಬಸ್ಥರು ರಸ್ತೆಯಲ್ಲೇ ಶವ ಸಂಸ್ಕಾರ ಮಾಡಿದ್ದಾರೆ.

ಈ ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ತಹಶಿಲ್ದಾರ್ ವರದರಾಜ್, ರುದ್ರಭೂಮಿಗಾಗಿ ಬೇರೆ ಜಾಗ ನೀಡುವುದಾಗಿ ಗ್ರಾಮಸ್ಥರಿಗೆ ಭರವಸೆ ನೀಡಿದರು. ಶವ ಸಂಸ್ಕಾರಕ್ಕೆ ಅಡ್ಡಿಪಡಿಸಿದವರ ವಿರುದ್ಧ ಅರಸಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!