ವಿದ್ಯುತ್‌ ಕಂಬಕ್ಕೆ ಕಾರು ಢಿಕ್ಕಿ; ಇಬ್ಬರು ವಿದ್ಯಾರ್ಥಿನಿಯರಿಗೆ ಸಣ್ಣಪುಟ್ಟ ಗಾಯ

ಶೇರ್ ಮಾಡಿ

ಅಪಘಾತ ವಲಯವಾದ ಪೆರಂಪಳ್ಳಿಯ ಸುಂದರಿಗೇಟ್‌ ಬಳಿ ಮಂಗಳವಾರ ತಡರಾತ್ರಿ ಚಾಲಕರ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಂಬ ತುಂಡಾಗಿ ಬಿದ್ದಿದೆ.

ತಮಿಳುನಾಡು ನೋಂದಣಿಯ ಕಾರು ಇದಾಗಿದ್ದು, ಅಂಬಾಗಿಲಿನಿಂದ ಮಣಿಪಾಲದ ಕಡೆಗೆ ಬರುತ್ತಿತ್ತು. ಕಾರಿನಲ್ಲಿದ್ದ ಇಬ್ಬರು ವಿದ್ಯಾರ್ಥಿನಿಯರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಈ ಭಾಗದಲ್ಲಿ ಈಗಾಗಲೇ ಹಲವಾರು ಅಪಘಾತಗಳು ಉಂಟಾಗಿವೆ. ವರ್ಷದ ಹಿಂದೆಯಷ್ಟೇ ಸ್ಪೀಡ್‌ ಬ್ರೇಕರ್‌ಗಳನ್ನು ಹಾಕಲಾಗಿದೆ. ಆದರೂ ಕಡಿದಾದ ತಿರುವು ಚಾಲಕರಲ್ಲಿ ಗೊಂದಲ ಸೃಷ್ಟಿಸುತ್ತಿರುವುದರಿಂದ ಅಪಘಾತಕ್ಕೆ ಕಾರಣವಾಗುತ್ತಿದೆ.

ಈ ಬಗ್ಗೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸೂಕ್ತ ಪರಿಶೀಲನೆ ನಡೆಸಿ ಕ್ರಮ ತೆಗೆದುಕೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

Leave a Reply

error: Content is protected !!