ಚೈತ್ರ ಕುಂದಾಪುರದ ವಿಚಾರದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಶರಣ್ ಪಂಪ್ ವೆಲ್ ಹೇಳಿದ್ದೇನು

ಶೇರ್ ಮಾಡಿ

ಚೈತ್ರಾ ಕುಂದಾಪುರ ಪ್ರಕರಣವು ಎರಡು ತಿಂಗಳ ಹಿಂದೆಯೇ ನನ್ನ ಗಮನಕ್ಕೆ ಬಂದಿತ್ತು ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಮುಖಂಡ ಶರಣ್ ಪಂಪ್ ವೆಲ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಜ್ರದೇಹಿ ಮಠದ ಸ್ವಾಮೀಜಿಗಳು ನನ್ನೊಂದಿಗೆ ಈ ವಿಚಾರವನ್ನ ಹಂಚಿಕೊಂಡಿದ್ರು. ನಿಮ್ಮ ಪಾತ್ರ ಇಲ್ಲವೆಂದ ಮೇಲೆ ತಲೆ ಕೆಡಿಸಿಕೊಳ್ಳಬೇಡಿ ಎಂದು ಸ್ವಾಮೀಜಿಯವರಿಗೆ ಹೇಳಿದ್ದೆ. ಈ ರೀತಿ ಪ್ರಕರಣಗಳು ಎಲ್ಲಿ ಕೂಡ ಆಗಬಾರದು ಎಂದು ಹೇಳಿದರು.

ಚೈತ್ರಾ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಚೈತ್ರಾ ಕುಂದಾಪುರ ನಮ್ಮ ಸಂಘಟನೆಯವರಲ್ಲ. ಉತ್ತಮ ವಾಗ್ಮಿ ಎಂಬ ಕಾರಣಕ್ಕೆ ಭಾಷಣಕ್ಕೆ ಕರೆಸಿಕೊಳ್ಳುತ್ತಿದ್ದೆವು. ಇಂತಹ ಘಟನೆಗಳಿಗೆ ನಮ್ಮ ಸಂಘಟನೆ ಆಸ್ಪದ ಕೊಡೋದಿಲ್ಲ ಎಂದು ತಿಳಿಸಿದರು.

Leave a Reply

error: Content is protected !!
%d