ವೇಶ್ಯಾವಾಟಿಕೆ ಕಾನೂನುಬದ್ಧಗೊಳಿಸಿ ಎಂದ ಆ ಸ್ಯಾಂಡಲ್ ವುಡ್ ಯಾರು?

ಶೇರ್ ಮಾಡಿ

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಕಿರಾತಕ’ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಪ್ರವೇಶ ಮಾಡಿದ್ದ ನಟಿ ಓವಿಯಾ ಇದೀಗ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಅವರು ಆಡಿದ ಈ ಮಾತು ಸಾಕಷ್ಟು ಚರ್ಚೆಗೂ ಕಾರಣವಾಗಿದೆ. ಕೆಲವರು ಓವಿಯಾ ಮಾತಿಗೆ ಮೆಚ್ಚುಗೆ ವ್ಯಕ್ತ ಪಡಿಸಿದ್ದರೆ, ಇನ್ನೂ ಕೆಲವರು ನೆಗೆಟಿವ್ ಕಾಮೆಂಟ್ ಮಾಡಿದ್ದಾರೆ.

ಅತ್ಯಾಚಾರ ಕುರಿತಂತೆ ಮಾತನಾಡಿರುವ ಓವಿಯಾ, ‘ವೇಶ್ಯಾವಾಟಿಕೆಯನ್ನು ಕಾನೂನುಬದ್ಧ ಮಾಡಿದರೆ, ಅತ್ಯಾಚಾರವನ್ನು ತಡೆಗಟ್ಟಬಹುದು. ಅತ್ಯಾಚಾರಕ್ಕೆ ಕಡಿವಾಣ ಹಾಕಲು ಇದೊಂದು ಸೂಕ್ತ ಮಾರ್ಗ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ. ಜೊತೆಗೆ ಲೈಂಗಿಕ ಶಿಕ್ಷಣದ ಬಗ್ಗೆಯೂ ಅವರು ಮಾತನಾಡಿದ್ದಾರೆ.

ಎಲ್ಲರಿಗೂ ಲೈಂಗಿಕ ಆಸಕ್ತಿಗಳು ಇವೆ. ಅದನ್ನು ಅದುಮಿಟ್ಟುಕೊಂಡು ಮುಖವಾಡ ಹಾಕಿಕೊಂಡು ಬದುಕುತ್ತಿದ್ದಾರೆ. ಮನುಷ್ಯರಿಗೆ ಸಹಜವಾದದ್ದು ಇರಲೇಬೇಕು ಎಂದು ಓವಿಯಾ ಮಾತನಾಡಿದ್ದಾರೆ. ಈ ಮಾತುಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಕೂಡ ಆಗಿದೆ. ಓವಿಯಾಗೆ ಅವಕಾಶಗಳು ಕಡಿಮೆ ಆಗುತ್ತಿವೆ. ಹಾಗಾಗಿ ಈ ರೀತಿ ಮಾತನಾಡಿ ಪ್ರಚಾರ ತೆಗೆದುಕೊಳ್ಳುತ್ತಿದ್ದಾರೆ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ.

Leave a Reply

error: Content is protected !!
%d