ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲದಲ್ಲಿ ಸಮಾಜಶಾಸ್ತ್ರದಲ್ಲಿ ಸಂಶೋಧನಾ ಕ್ಷೇತ್ರಗಳು ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ

ಶೇರ್ ಮಾಡಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಸಮಾಜ ಶಾಸ್ತ್ರ ವಿಭಾಗದಿಂದ ಸೆ.22ರಂದು ಸಮಾಜಶಾಸ್ತ್ರದಲ್ಲಿ ಸಂಶೋಧನಾ ಕ್ಷೇತ್ರಗಳು ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.

ವಿವೇಕಾನಂದ ಮಹಾವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ವಿದ್ಯಾ ಎಸ್ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಮಹಾವಿದ್ಯಾಲಯದ ಪ್ರಾಂಶುಪಾಲರಾದ ದಿನೇಶ್ ಪಿ.ಟಿ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ್ದರು.

ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಮನೋಹರ ಪ್ರಸ್ತಾವಿಕ ನುಡಿಗಳನ್ನು ನುಡಿದರು. ಉಪನ್ಯಾಸಕಿ ಶ್ರೀಮತಿ ಆರತಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಆಶಿಕ ಕಾರ್ಯಕ್ರಮ ನಿರೂಪಿಸಿದರು. ನವ್ಯ ಸ್ವಾಗತಿಸಿದರು. ನಮಿತಾ ಸಂಪನ್ಮೂಲ ವ್ಯಕ್ತಿಗಳ ಪರಿಚಯವನ್ನು ಓದಿದರು. ಕವನ ಧನ್ಯವಾದ ಸಮರ್ಪಿಸಿದರು.

Leave a Reply

error: Content is protected !!
%d