ಗಣೇಶ ಚತುರ್ಥಿ ಆಚರಣೆ ವೇಳೆ ತಮಿಳುನಾಡಿನ ವೆಲ್ಲೂರು ಮೂಲದ ವ್ಯಕ್ತಿಯೊಬ್ಬ ಬುರ್ಕಾ ಧರಿಸಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಆತನನ್ನು ಬಂಧಿಸಲಾಗಿದೆ.
ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ವ್ಯಕ್ತಿಯೊಬ್ಬ ಬುರ್ಕಾ ಧರಿಸಿ ನೃತ್ಯ ಮಾಡಿದ್ದ. ಈ ದೃಶ್ಯದ ವೀಡಿಯೋ ವೈರಲ್ ಆಗಿತ್ತು. ಬುರ್ಕಾ ಧರಿಸಿದ್ದ ವ್ಯಕ್ತಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.
ದೂರು ಆಧರಿಸಿ ಪೊಲೀಸರು ತನಿಖೆ ನಡೆಸಿ, ವಿರುತ್ತಂಪಟ್ಟು ಮೂಲದ ಅರುಣ್‌ಕುಮಾರ್ ಎಂಬಾತನನ್ನು ಬಂಧಿಸಿದ್ದಾರೆ. ಘಟನೆಯಲ್ಲಿ ಭಾಗಿಯಾಗಿರುವ ಇತರರ ಪತ್ತೆಗೆ ಪೊಲೀಸರು ಮುಂದಾಗಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.
ಎರಡು ಸಮುದಾಯಗಳ ನಡುವೆ ದ್ವೇಷ ಉಂಟು ಮಾಡಲು ಯತ್ನಿಸಿದ ಆರೋಪದಡಿ ಅರುಣ್‌ಕುಮಾರ್‌ನನ್ನು ಬಂಧಿಸಲಾಗಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲು ಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.