ಸ್ಕೂಟರ್ ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ‌ಮಹಿಳೆ ಸಾವು

ಶೇರ್ ಮಾಡಿ

ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಕೆರೆಬೈಲು‌ ಬಳಿ ಸ್ಕೂಟರ್ ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ‌ಮಹಿಳೆಯೊಬ್ವರು ಚಿಕಿತ್ಸೆ ಫಲಕಾರಿಯಾಗದೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕಾಸರಗೋಡು ಮಧೂರು ನಿವಾಸಿ ಸುಮಾ ನಾರಾಯಣ ಗಟ್ಟಿ ( 52) ಮೃತಪಟ್ಟವರು.

ಮೂಲತ: ಬಂಟ್ವಾಳ ನೆಟ್ಲದವರಾಗಿದ್ದ ಇವರು ಸೆ.24ರ ಭಾನುವಾರ ಕುಟುಂಬದ ಮನೆ ಪಿಲಾರು ಅರಮನೆಯಲ್ಲಿ‌ನಡೆದ ಪೂಜೆಯಲ್ಲಿ ಪಾಲ್ಗೊಂಡು ಸಂಜೆ ಕಾಸರಗೋಡು ಕಡೆ ತೆರಳಲು ಸಹೋದರನ ಬೈಕ್ ನಲ್ಲಿ ತೊಕ್ಕೊಟ್ಟು ಜಂಕ್ಷನ್ ಗೆ ಹೋಗುವವರಿದ್ದರು.
ಈ‌ ನಡುವೆ ಜಪ್ಪಿನಮೊಗರು ಬಳಿಯ ಸಂಬಂಧಿಕರ ಮನೆಗೆ ತೆರಳಿ ಬಳಿಕ ಬೀರಿಗೆ ಬಂದು ಅಲ್ಲಿಂದ ಕಾಸರಗೋಡು ಕಡೆ ತೆರಳಲು ಹೆದ್ದಾರಿಯಲ್ಲಿ ತೊಕ್ಕೊಟ್ಟು ಪ್ಲೈಓವರ್ ಬಳಿ ತಲುಪುತ್ತಿದ್ದಂತೆ ಕೆರೆಬೈಲು ನಾಗನ ಕಟ್ಟೆ ಬಳಿ ಸ್ಕೂಟರ್ ನಿಂದ ಕೆಳಗೆ ಉರುಳಿ ಬಿದ್ದಿದ್ದಾರೆ. ಈ ಪರಿಣಾಮ ತಲೆಗೆ ಗಂಭೀರ ಗಾಯಗೊಂಡಿದ್ದ ಸುಮಾ ಅವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ದೇರಳಕಕಟ್ಟೆ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತರು ಪತಿ, ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Leave a Reply

error: Content is protected !!
%d