ಹಿರಿಯ ನಟ ಬ್ಯಾಂಕ್ ಜನಾರ್ದನ್​ಗೆ ಹೃದಯಾಘಾತ; ಆಐಸಿಯುನಲ್ಲಿ ಚಿಕಿತ್ಸೆ

ಶೇರ್ ಮಾಡಿ

ಸ್ಯಾಂಡಲ್​ವುಡ್​ನ ಹಿರಿಯ ನಟ ಬ್ಯಾಂಕ್ ಜನಾರ್ದನ್ ಅವರಿಗೆ ಹೃದಯಘಾತ ಆಗಿದೆ. ಈ ಸುದ್ದಿ ಕೇಳಿ ಅವರ ಅಭಿಮಾನಿಗಳಿಗೆ, ಸಿನಿಪ್ರಿಯರಿಗೆ ಆತಂಕ ಕಾಡಲು ಆರಂಭವಾಗಿದೆ. ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡುವ ಕೆಲಸ ಮಾಡಲಾಗುತ್ತಿದೆ. ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

ತಂದೆಯ ಆರೋಗ್ಯದ ಕುರಿತು ಬ್ಯಾಂಕ್ ಜನಾರ್ದನ್ ಪುತ್ರ ಗುರುಪ್ರಸಾದ್ ಮಾಹಿತಿ ನೀಡಿದ್ದಾರೆ. ಹೆದರುವ ಅಗತ್ಯವಿಲ್ಲ ಎಂದಿದ್ದಾರೆ. ‘ಬ್ಯಾಂಕ್ ಜನಾರ್ದನ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಆರೋಗ್ಯವಾಗಿದ್ದಾರೆ. ಸದ್ಯ ಅವರಿಗೆ ಆಂಜಿಯೋಗ್ರಾಮ್ ಮಾಡಲಾಗುತ್ತಿದೆ’ ಎಂದು ಗುರುಪ್ರಸಾದ್ ಅವರು ಮಾಹಿತಿ ನೀಡಿದ್ದಾರೆ.

ಬ್ಯಾಂಕ್ ಜನಾರ್ದನ್ ಜನಿಸಿದ್ದು 1949ರಲ್ಲಿ. ಅವರು 1991ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ‘ಅಜಗಜಾಂತರ’ ಅವರ ನಟನೆಯ ಮೊದಲ ಸಿನಿಮಾ. ಆ ಬಳಿಕ ‘ಗೌರಿ ಗಣೇಶ’, ‘ತರ್ಲೆ ನನ್ಮಗ’, ‘ಶ್’ ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿದರು. 2012ರಿಂದ ಈಚೆ ಅವರು ಹೆಚ್ಚು ಸಿನಿಮಾಗಳನ್ನು ಮಾಡುತ್ತಿಲ್ಲ. ನಾಟಕ ಹಾಗೂ ಧಾರಾವಾಹಿಗಳಲ್ಲೂ ಅವರು ನಟಿಸಿದ್ದಾರೆ. ಹಾಸ್ಯ ಹಾಗೂ ವಿಲನ್ ಪಾತ್ರಗಳ ಮೂಲಕ ಜನಾರ್ದನ್ ಅವರು ಗುರುತಿಸಿಕೊಂಡಿದ್ದಾರೆ.

Leave a Reply

error: Content is protected !!