ಬಂದೋಬಸ್ತ್‌ ನಲ್ಲಿದ್ದ ಪೊಲೀಸರಿಗೆ ಕೊಟ್ಟ ಟಿಫನ್‍ನಲ್ಲಿ ಇಲಿ!

ಶೇರ್ ಮಾಡಿ

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಇಂದು ಬಂದ್‍ಗೆ ಕರೆ ನೀಡಿವೆ. ಹೀಗಾಗಿ ಪೊಲೀಸ್ ಬಂದೋಬಸ್ತ್‌ ಗೆ ನಿಯೋಜಿಸಿದ ಪೊಲೀಸರಿಗೆ ಅಸಮರ್ಪಕ ಆಹಾರವನ್ನು ಪೂರೈಕೆ ಮಾಡಿರುವುದು ಬಯಲಾಗಿದೆ.

ಹೌದು. ಯಶವಂತಪುರ ಸಂಚಾರಿ ಪೊಲೀಸರಿಗೆ ನೀಡಿದ ಬೆಳಗ್ಗಿನ ಉಪಹಾರದಲ್ಲಿ ಸತ್ತ ಇಲಿ ಪತ್ತೆಯಾಗಿದೆ. ಉಪಹಾರವೆಂದು ರೈಸ್ ಬಾತ್ ನೀಡಲಾಗಿದೆ. ಈ ವೇಳೆ ಪೊಲೀಸ್ ಆ ಪೊಟ್ಟಣವನ್ನು ಓಪನ್ ಮಾಡಿದಾಗ ಇಲಿ ಕಂಡು ಗಾಬರಿಯಾಗಿದ್ದಾರೆ.

ಒಟ್ಟಿನಲ್ಲಿ ಬಂದೋಬಸ್ತ್ ನಲ್ಲಿ ನಿರತರಾಗಿದ್ದ ಪೊಲೀಸರಿಗೆ ‘ಇಲಿ’ ಉಪಹಾರ ನೀಡಿದ್ದಕ್ಕೆ ಆಕ್ರೋಶ ವ್ಯಕ್ತವಾಗಿದೆ.

Leave a Reply

error: Content is protected !!