ಚಿನ್ನದಂಗಡಿ ಗೋಡೆ ಒಡೆದು 25 ಕೋಟಿ ರೂ. ಮೌಲ್ಯದ ಆಭರಣ ದರೋಡೆ

ಶೇರ್ ಮಾಡಿ

ಚಿನ್ನದಂಗಡಿ ಒಂದರ ಗೋಡೆ ಒಡೆದು 25 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿದ ಪ್ರಕರಣ ದೆಹಲಿಯಭೋಗಲ್ ಪ್ರದೇಶದಲ್ಲಿ ನಡೆದಿದೆ.

ಸಂಜೀವ್ ಜೈನ್ ಎಂಬವರಿಗೆ ಸೇರಿದ ಅಂಗಡಿಯಲ್ಲಿ ಈ ಕಳ್ಳತನವಾಗಿದೆ. ಅವರು ಎರಡು ದಿನಗಳಿಂದ ಅಂಗಡಿ ಮುಚ್ಚಿದ್ದರು. ಇಂದು (ಮಂಗಳವಾರ) ಅಂಗಡಿ ತೆರೆದಾಗ ಇಡೀ ಅಂಗಡಿಯಲ್ಲಿ ಧೂಳು ತುಂಬಿತ್ತು. ಅಲ್ಲದೇ ಸಿಸಿ ಕ್ಯಾಮೆರಾಗಳಿಗೆ ಹಾನಿ ಮಾಡಲಾಗಿತ್ತು. ಬಳಿಕ ಅಂಡಿಯನ್ನು ಪರೀಶೀಲಿಸಿದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ ಸಂಜೀವ್ ತಿಳಿಸಿದ್ದಾರೆ.

ಸ್ಟ್ರಾಂಗ್ ರೂಮ್‍ನ ಗೋಡೆಯಲ್ಲಿ ರಂಧ್ರ ಕೊರೆದಿದ್ದಾರೆ. ಬಳಿಕ ಟೆರೇಸ್ ಮೂಲಕ ಬಂದು ಸಿಸಿಟಿವಿಗಳಿಗೆ ಹಾನಿಮಾಡಿದ್ದಾರೆ. ಬಳಿಕ ಅಂಗಡಿಯಲ್ಲಿದ್ದ ಚಿನ್ನಾಭರಣ ದೋಚಿದ್ದಾರೆ.

ಈ ಪ್ರಕರಣದ ಬಗ್ಗೆ ಮಾತನಾಡಿರುವ ಡಿಸಿಪಿ ರಾಜೇಶ್ ಡಿಯೋ, ಪ್ರಕರಣದ ತನಿಖೆ ನಡೆಯುತ್ತಿದೆ. ಅಂಗಡಿಯನ್ನು ಎರಡು ದಿನ ಮುಚ್ಚುವ ವಿಚಾರ ತಿಳಿದವರೇ ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Leave a Reply

error: Content is protected !!
%d