ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ತರಬೇತಿ

ಶೇರ್ ಮಾಡಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಸಮಾಜಶಾಸ್ತ್ರ ವಿಭಾಗ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಘಟಕದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಕಾರ್ಯಕ್ರಮವು ನಡೆಯಿತು.

ಮಂಗಳೂರಿನ ಸರ್ವಜ್ಞ ಅಕಾಡೆಮಿಯ ನಿರ್ದೇಶಕರಾದ ಸುರೇಶ್ ಎಂ.ಎಸ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಮಹಾವಿದ್ಯಾಲಯ ದ ಪ್ರಾಂಶುಪಾಲರಾದ ದಿನೇಶ ಅಧ್ಯಕ್ಷ ಸ್ಥಾನವನ್ನು ವಹಿಸಿದ್ದರು.

ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಘಟಕದ ಸಂಯೋಜಕರು ಆಗಿರುವ ಮನೋಹರ ಪ್ರಸ್ತಾವಿಕ ನುಡಿಗಳನ್ನು ನುಡಿದರು. ಉಪನ್ಯಾಸಕಿ ಆರತಿ ಕೆ. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ವಿಜ್ಞೇಶ್ ಕಾರ್ಯಕ್ರಮ ನಿರೂಪಿಸಿದರು. ದೀಕ್ಷಿತ್ ಸ್ವಾಗತಿಸಿದರು, ಶರಣ್ಯ ಅತಿಥಿಗಳನ್ನು ಪರಿಚಯಿಸಿದರು, ಉದಯಕುಮಾರ್ ಧನ್ಯವಾದ ಸಮರ್ಪಿಸಿದರು.

Leave a Reply

error: Content is protected !!
%d