ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದಲ್ಲಿ ಲೋಗೋ ಪ್ರದರ್ಶನ

ಶೇರ್ ಮಾಡಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ ಸುಬ್ರಹ್ಮಣ್ಯ, ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ವಾಣಿಜ್ಯ ಹಾಗೂ ಉದ್ಯಮಾಡಳಿತ ವಿಭಾಗದ ಆಶ್ರಯದಲ್ಲಿ ಪ್ರಥಮ ಬಿಕಾಂ ವಿದ್ಯಾರ್ಥಿಗಳಿಂದ ಲೋಗೋ ಪ್ರದರ್ಶನವು ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆಯಿತು.

ಪ್ರದರ್ಶನದಲ್ಲಿ ವಿದ್ಯಾರ್ಥಿಗಳು ಒಟ್ಟು 34 ವಿವಿಧ ಆಪ್ ಗಳನ್ನು ರಂಗೋಲಿಯಲ್ಲಿ ಮೂಡಿಸಿದರು. ಕಾರ್ಯಕ್ರಮವನ್ನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ದಿನೇಶ್ ಪಿ.ಟಿ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟನೆ ಮಾಡಿ ಪ್ರದರ್ಶನ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಆಂತರಿಕ ಗುಣಮಟ್ಟ ಭರವಸಾಕೋಶದ ಸಂಚಾಲಕರಾದ ಶ್ರೀಮತಿ ಲತಾ ಬಿ.ಟಿ., ವಾಣಿಜ್ಯ ಮತ್ತು ಉದ್ಯಮಾಡಳಿತ ಸಂಘದ ಉಪನ್ಯಾಸಕ ಪ್ರತಿನಿಧಿ ಶ್ರೀಮತಿ ಅಶ್ವಿನಿ, ಕಾರ್ಯಕ್ರಮದ ಸಂಯೋಜಕರಾದ ಶಿವಪ್ರಸಾದ್.ಎಸ್., ವಿದ್ಯಾರ್ಥಿ ನಾಯಕ ಸುಹಾಸ್ ಉಪಸ್ಥಿತರಿದ್ದರು.

Leave a Reply

error: Content is protected !!
%d