
ಮೊಬೈಲ್‌ನಲ್ಲಿ ಮಾತನಾಡುತ್ತಿದ್ದಾಗಲೇ ವ್ಯಕ್ತಿಯೋರ್ವರು ತೀವ್ರ ಅಸ್ವಸ್ಥಗೊಂಡು ಸಾವನ್ನಪ್ಪಿದ ಘಟನೆ ಸೆ. 28ರಂದು ನಡೆದಿದೆ.
ಮಲ್ಪೆ ಕೊಪ್ಪಲತೋಟದ ಶಂಕರ್ ಕುಂದರ್ (63) ಅವರು ಸಾವನ್ನಪ್ಪಿದ್ದು, ರಾತ್ರಿ ಮನೆಯಲ್ಲಿ ಊಟ ಮಾಡಿ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದರು.
ಈ ವೇಳೆ ತೀವ್ರ ಅಸ್ವಸ್ಥಗೊಂಡ ಮಾತನಾಡದ ಸ್ಥಿತಿಯಲ್ಲಿದ್ದ ಅವರನ್ನು ತತ್‌ಕ್ಷಣ ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ವೈದ್ಯರು ಕಾರ್ಡಿಯಲ್ ಆಟ್ಯಾಕ್ ಆಗಿರುವುದಾಗಿ ತಿಳಿಸಿದ್ದರು. ತತ್‌ಕ್ಷಣ ಅಲ್ಲಿಂದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿಸಲಾಗಿದ್ದು, ಪರೀಕ್ಷಿಸಿದ ವೈದ್ಯರು ಅವರು ಆದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


