ಬೈಕ್‌ಗಳ ಅಪಘಾತದಲ್ಲಿ ನೆಲಕ್ಕೆ ಬಿದ್ದ ಸವಾರರ ಮೇಲೆ ಹರಿದ ಲಾರಿ – ಮೂವರು ಸ್ಥಳದಲ್ಲೇ ಸಾವು

ಶೇರ್ ಮಾಡಿ

2 ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನೆಲಕ್ಕೆ ಬಿದ್ದ ಸವಾರರ ಮೇಲೆ ಲಾರಿಯೊಂದು ಹರಿದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಭದ್ರಾವತಿ ತಾಲೂಕಿನ ಅರಹತೊಳಲು ಗ್ರಾಮದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಮೃತರನ್ನು ವಿಕಾಸ್ (18), ಯಶ್ವಂತ್ (17), ಹಾಗೂ ಶಶಾಂಕ್ (17) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಒಬ್ಬನಿಗೆ ಗಂಭೀರ ಗಾಯವಾಗಿದ್ದು ಆತನನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಹಳೆ ಜಂಬರಗಟ್ಟ ನಿವಾಸಿಗಳು ಎಂಬುದು ತಿಳಿದುಬಂದಿದೆ.

ಶನಿವಾರ ರಾತ್ರಿ 2 ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರು ರಸ್ತೆ ಮೇಲೆ ಬಿದ್ದಿದ್ದರು. ಈ ವೇಳೆ ವೇಗವಾಗಿ ಬಂದ ಲಾರಿ ರಸ್ತೆ ಮೇಲೆ ಬಿದ್ದಿದ್ದ ಸವಾರರ ಮೇಲೆ ಹರಿದಿದೆ. ಘಟನೆ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
%d bloggers like this: