ಪ್ರಧಾನಿ ನರೇಂದ್ರ ಮೋದಿಯವರು ಗಾಂಧಿ ಜಯಂತಿಯ ಪೂರ್ವ ದಿನವಾದ ಇಂದು ಕಸ ಗುಡಿಸಿ ಸ್ವಚ್ಛಗೊಳಿಸಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಈ ಮೂಲಕ ಗಾಂಧಿಜಿಯವರಿಗೆ ಸ್ವಚ್ಛಾಂಜಲಿ ಅರ್ಪಿಸಿದ್ದಾರೆ.
ಈ ವೇಳೆ ಮೋದಿಯವರು ಫಿಟ್ನೆಸ್ ಕ್ಷೇತ್ರದಲ್ಲಿ ಹೆಸರು ಮಾಡಿರುವ ಅಂಕಿತ್ ಬೈಯನ್ಪುರಿಯಾ ಅವರೊಂದಿಗೆ ಕಾಣಿಸಿಕೊಂಡಿದ್ದಾರೆ. ಅಭಿಯಾನಕ್ಕೆ ಮೋದಿ ಹಾಗೂ ಅಂಕಿತ್ ಇಬ್ಬರು ಕಸ ಗುಡಿಸುವ ಮೂಲಕ ವಿಶೇಷವಾಗಿ ಚಾಲನೆ ನೀಡಿದ್ದಾರೆ. ಬಳಿಕ ಮೋದಿಯವರು ಫಿಟ್ನೆಸ್ ಮತ್ತು ಆರೋಗ್ಯದ ವಿಚಾರವಾಗಿ ಮಾತುಕತೆ ನಡೆಸಿದ್ದಾರೆ. ಈ ವೀಡಿಯೋವನ್ನು ಪ್ರಧಾನಿ ನರೇಂದ್ರ ಮೋದಿಯವರು ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ.
ರಾಷ್ಟ್ರದ ಸ್ವಚ್ಛತೆಗೆ ಆದ್ಯತೆ ನೀಡಿ ಈ ಅಭಿಯಾನಕ್ಕೆ ಚಾಲನೆ ನೀಡಿದ್ದೇವೆ. ಸ್ವಚ್ಛತೆಯ ಹೊರತಾಗಿ ಫಿಟ್ನೆಸ್ ಮತ್ತು ಆರೋಗ್ಯದ ಬಗ್ಗೆಯೂ ಚರ್ಚಿಸಿದ್ದೇವೆ. ಈ ಮೂಲಕ ಸ್ವಚ್ಛ ಮತ್ತು ಸ್ವಸ್ತ್ ಭಾರತ ಎಂಬ ಪರಿಕಲ್ಪನೆಯನ್ನು ಬಿತ್ತಲಾಗಿದೆ ಎಂದು ಅವರು ಬರೆದುಕೊಂಡಿದ್ದಾರೆ.
Today, as the nation focuses on Swachhata, Ankit Baiyanpuriya and I did the same! Beyond just cleanliness, we blended fitness and well-being also into the mix. It is all about that Swachh and Swasth Bharat vibe! @baiyanpuria pic.twitter.com/gwn1SgdR2C
— Narendra Modi (@narendramodi) October 1, 2023