ಎಲ್.ಐ.ಸಿ. ಏಜೆಂಟ್ ನಾರಾಯಣ ಕುಲಾಲ್ ಆತ್ಮಹತ್ಯೆ

ಶೇರ್ ಮಾಡಿ

ಮಾಣಿ- ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ಆ.2ರ ಸೋಮವಾರ ಮುಂಜಾನೆ ಯುವಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.

ಮೃತನನ್ನು ಸೂರಿಕುಮೇರು ನಿವಾಸಿ, ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ, ಎಲ್.ಐ.ಸಿ. ಏಜೆಂಟ್ ನಾರಾಯಣ ಕುಲಾಲ್ ಎಂದು ಗುರುತಿಸಲಾಗಿದೆ.

ಸೋಮವಾರ ಮುಂಜಾನೆ 5 ರ ವೇಳೆಗೆ ಪರ್ಲೊಟ್ಟು ಎಂಬಲ್ಲಿನ ಕೆರೆಯ ಬಳಿ ಬೈಕ್, ಮೊಬೈಲ್, ಚಪ್ಪಲಿ ನೋಡಿದ ಸ್ಥಳೀಯರು ಯಾರೋ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂಬ ಸಂಶಯದಿಂದ ವಿಟ್ಲ ಪೊಲೀಸ್ ಠಾಣೆ ಹಾಗೂ ಅಗ್ನಿಶಾಮಕ ದಳದವರಿಗೆ ತಿಳಿಸಿದ್ದಾರೆ.

ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದು, ಕೆರೆಯಲ್ಲಿ ಹುಡುಕಾಟ ನಡೆಸಿ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ.

ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ. ಇದು ಆತ್ಮಹತ್ಯೆ ಎನ್ನಲಾಗುತ್ತಿದ್ದು ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿಯಬೇಕಾಗಿದೆ

Leave a Reply

error: Content is protected !!
%d