ಬೈಕಿಗೆ ಕಾರು ಡಿಕ್ಕಿ ಬೈಕ್ ಸವಾರ ಗಂಭೀರ

ಶೇರ್ ಮಾಡಿ

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಸಮೀಪ ಕಾರೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಅ.2ರಂದು ಸಂಭವಿಸಿದೆ.

ಗಾಯಾಳುವನ್ನು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಸಿಬ್ಬಂದಿ ಎಂದು ಹೇಳಲಾಗುತ್ತಿದ್ದು ಬಿಹಾರ್ ಮೂಲದವರ ಕಾರು ಇದಾಗಿದ್ದು, ಕಾರು ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿತ್ತು ಎನ್ನಲಾಗಿದೆ.

ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಹೆಡ್ ಕಾನ್ಸ್ಟೇಬಲ್ ಕುಶಾಲಪ್ಪ ಹಾಗೂ ಸಿಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Leave a Reply

error: Content is protected !!
%d