ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ನೇರ್ಲ ಇಚ್ಲಂಪಾಡಿಯಲ್ಲಿ ಇಂದು ಬೆಳಿಗ್ಗೆ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಯಶ್ರೀ ಎಸ್. ಎಲ್ಲರನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದ, ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಸದಸ್ಯರು, ಅಕ್ಷರ ದಾಸೋಹ ಸಿಬ್ಬಂದಿಗಳು ಹಾಗೂ ಶಾಲಾ ಮಕ್ಕಳು ಭಾಗವಹಿಸಿದ್ದರು .
ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಗಳಿಗೆ ಪುಷ್ಪ ನಮನವನ್ನು ಸಲ್ಲಿಸಲಾಯಿತು. ಮಕ್ಕಳು ಗಾಂಧೀಜಿಯವರ ಬಗ್ಗೆ ಭಾಷಣ ಮಾಡಿದರು. ಗಾಂಧೀಜಿಯವರಿಗೆ ಪ್ರಿಯವಾದ ಭಜನೆಗಳನ್ನು ಹಾಡಲಾಯಿತು.
ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರು ವಸಂತ ಬಿಜೇರು, ಶಿಕ್ಷಕರಾದ ಗಿರೀಶ್ ಮಾತನಾಡಿ ಗಾಂಧೀಜಿಯವರ ತತ್ವಗಳಾದ ಅಹಿಂಸೆ, ಸತ್ಯ, ಪ್ರಾಮಾಣಿಕತೆ, ಸರಳತೆಯನ್ನು ಮಕ್ಕಳಿಗೆ ತಿಳಿಸಿ ಜೀವನದಲ್ಲಿ ಅಳವಡಿಸುವಂತೆ ಹೇಳಿದರು ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿಯವರ ಪ್ರಾಮಾಣಿಕತೆ, ಸರಳತೆ ಮತ್ತು ಸಾಧನೆಯನ್ನು ಮಕ್ಕಳಿಗೆ ಪರಿಚಯಿಸಿದರು
ಜೊತೆಗೆ ರಾಷ್ಟ್ರೀಯ ಸ್ವಚ್ಛತಾ ದಿವಸದ ಮಹತ್ವವನ್ನು ತಿಳಿಸಿದರು. ಕೊನೆಯಲ್ಲಿ ಹಿರಿಯ ಶಿಕ್ಷಕಿ ಶ್ರೀಮತಿ ಜಯ ರವರು ವಂದಿಸಿದರು.