ಸುಬ್ರಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಆಚರಣೆ ಪ್ರಯುಕ್ತ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ಯೂತ್ ರೆಡ್ ಕ್ರಾಸ್ ಘಟಕ, ಗ್ರಾಮ ಪಂಚಾಯತ್ ಸುಬ್ರಹ್ಮಣ್ಯ, ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯ ಹಾಗೂ ವಿವಿಧ ಸಂಘ ಸಂಸ್ಥೆಗಳು ಜೊತೆ ಸೇರಿ ಸ್ವಚ್ಛತಾ ಕಾರ್ಯಕ್ರಮ.
ಕಾಲೇಜಿನ ಪ್ರಾಂಶುಪಾಲರು, ಆಂತರಿಕ ಗುಣಮಟ್ಟ ಮತ್ತು ಭರವಸಾಕೋಶದ ಸಂಯೋಜಕರು, ರೋಟರಿ ಕ್ಲಬ್ ಸುಬ್ರಹ್ಮಣ್ಯದ ಅಧ್ಯಕ್ಷರು, ಲಯನ್ಸ್ ಕ್ಲಬ್ ಸುಬ್ರಹ್ಮಣ್ಯದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಶ್ರೀವಾಣಿ ವನಿತಾ ಸಮಾಜದ ಪದಾಧಿಕಾರಿಗಳು, ಕಾಲೇಜಿನ ವಿದ್ಯಾರ್ಥಿ ಪರಿಷತ್ತಿನ ಪ್ರತಿನಿಧಿಗಳು, ಕಾಲೇಜಿನ ಉಪನ್ಯಾಸಕರು ಮತ್ತು ಬೋಧಕೇತರ ವರ್ಗ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರು, ರೆಡ್ ಕ್ರಾಸ್ ಘಟಕದ ವಿದ್ಯಾರ್ಥಿಗಳು ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದರು.
ರಾಜಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸ್ವಾತಿ.ಕೆ ಇವರು ಗಾಂಧೀಜಿ ಮತ್ತು ಶಾಸ್ತ್ರಿಯವರ ಆದರ್ಶಗಳ ಕುರಿತಾಗಿ ಮಾತನಾಡಿದರು.
ಶ್ರೀಮತಿ ಮಧುರಾ ಇವರು ಸ್ವಾಗತಿಸಿ, ನಿರೂಪಿಸಿದರು. ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷ ಸುಹಾಸ್.ಎಂ.ಜಿ ವಂದಿಸಿದರು.
ವಿದ್ಯಾರ್ಥಿಗಳು ಕುಮಾರಧಾರದಿಂದ ದೇವಳದವರೆಗೆ ಸ್ವಚ್ಛತೆಯನ್ನು ಮಾಡಿದರು.