ಕಾಡಿನಲ್ಲಿ ಸಿಗುವ ಯಾವುದೋ ಹಣ್ಣುನ್ನು ಮೈರೋಳ್ ಹಣ್ಣ ಎಂದು ಭಾವಿಸಿ ಮನೆಗೆ ತಂದು ಶರಬತ್ತು ಮಾಡಿ ಕುಡಿದ ಮಹಿಳೆಯೊಬ್ಬರು ಅಸ್ವಸ್ಥಗೊಂಡು ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ.
ಸುಳ್ಯದ ಅಮರಪಡ್ನೂರು ಗ್ರಾಮದ ಕುಳ್ಳಾಜೆ ನಿವಾಸಿ ಲೀಲಾವತಿ(35) ಮೃತಪಟ್ಟವರು. ಇವರ ತಂದೆ ಲೋಕಯ್ಯ ನಾಯ್ಕ ಕೂಡಾ ಹಣ್ಣಿನ ಶರಬತ್ತು ಕುಡಿದು ಅಸ್ವಸ್ಥಗೊಂಡಿದ್ದರೆನ್ನಲಾಗಿದೆ. ಲೀಲಾವತಿ ಹಾಗೂ ಲೋಕಯ್ಯ ನಾಯ್ಕ ಒಂದು ವಾರದ ಹಿಂದೆ ಮೈರೋಳ್ ಹಣ್ಣಿನ ರಸ ತೆಗೆದು ಶರಬತ್ತು ಮಾಡಿ ಕುಡಿದಿದ್ದರು ಎನ್ನಲಾಗಿದೆ.
ಪರಿಣಾಮವಾಗಿ ತಂದೆ ಮಗಳಿಬ್ಬರೂ ಅಸ್ವಸ್ಥಗೊಂಡಿದ್ದರು. ಈ ಪೈಕಿ ವಾಂತಿ, ಭೇದಿ ಕಾಣಿಸಿಕೊಂಡಿದ್ದ ಲೀಲಾವತಿಯನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಸ್ವಸ್ಥತೆ ತೀವ್ರಗೊಂಡ ಹಿನ್ನಲೆಯಲ್ಲಿ ಸೋಮವಾರ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.
ತೆಲಂಗಾಣದಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ದೈಹಿಕ ಶಿಕ್ಷಕರಾದ ಏಲಿಯಸ್ ಪಿಂಟೋ, ರಾಜೇಶ್ ಮೂಲ್ಯ ಹಾಗೂ ಪುಷ್ಪರಾಜ್ ಇವರಿಗೆ ತರಬೇತಿಯನ್ನು ನೀಡಿದ್ದಾರೆ.
ಪ್ರಸ್ತುತ ಇವರು ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ. ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯ ಹಳೆವಿದ್ಯಾರ್ಥಿ.
ನೆಲ್ಯಾಡಿ ಅಶ್ವಮೇಧ ಕ್ಯಾಟರರ‍್ಸ್ ಮಾಲಕರಾದ ರತ್ನಾಕರ ಶೆಟ್ಟಿ ಮತ್ತು ಶ್ರೀಮತಿ ಹೇಮಲತಾ ಅವರ ಪುತ್ರ.