ಕರ್ತವ್ಯದ ಮಧ್ಯೆ ರಕ್ತದಾನ ಮಾಡುವ ಮೂಲಕ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದ ನೆಲ್ಯಾಡಿ ಹೊರಠಾಣೆಯ ಪೋಲಿಸ್ ಸಿಬ್ಬಂದಿ

ಶೇರ್ ಮಾಡಿ

ನೆಲ್ಯಾಡಿ: ಕರ್ನಾಟಕ ಸರಕಾರ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ನ ಸಮಾಜ ಕಾರ್ಯ ವಿಭಾಗ ಮತ್ತು ನೆಲ್ಯಾಡಿ ಗ್ರಾಮ ಪಂಚಾಯತ್ ಇವರ ಆಶ್ರಯದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ‌ಬ್ಯಾಂಕ್ ಲೇಡಿಗೋಶನ್ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ ಅ.4ರಂದು ನೆಲ್ಯಾಡಿ ಎಲೈಟ್ ಹಾಲ್ ನಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ಕರ್ತವ್ಯದ ಮಧ್ಯೆ ನೆಲ್ಯಾಡಿ ಹೊರ ಠಾಣೆಯ ಜನಸ್ನೇಹಿ ಪೋಲಿಸ್ ಹೆಡ್‍ಕಾನ್‍ಸ್ಟೇಬಲ್ ಕುಶಾಲಪ್ಪ ನಾಯ್ಕ ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿ ರವಿರಾಜ್ ರವರು ಶಿಬಿರಕ್ಕೆ ಭೇಟಿ ನೀಡಿ ಸ್ವ ಇಚ್ಛೆಯಿಂದ ರಕ್ತದಾನ ಮಾಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.

ಇವರ ಸಾಮಾಜಿಕ ಕಳಕಳಿಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

Leave a Reply

error: Content is protected !!
%d