ಕಾರು ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ

ಶೇರ್ ಮಾಡಿ

ಬೈಕ್ ಗೆ ಕಾರು ಢಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಾಮಾಜೆ ಕ್ರಾಸ್ ಬಳಿ ಇಂದು ನಡೆದಿದೆ.

ವಾಮದಪದವು ಸಮೀಪದ ಪಾಂಗಲ್ಪಾಡಿ ನಿವಾಸಿ ಶ್ರೀನಿವಾಸ ಉಡುಪ (58)(ಬಾಬು) ಮೃತಪಟ್ಟ ವ್ಯಕ್ತಿ. ವಾಮದಪದವನಿಂದ ಬಿಸಿರೋಡಿಗೆ ಬರುತ್ತಿದ್ದ ವೇಳೆ ಹಿಂಬದಿಯಿಂದ ಬರುತ್ತಿದ್ದ ಕಾರು ಢಿಕ್ಕಿಯಾಗಿದೆ.ಶ್ರೀನಿವಾಸ ಅವರು ಬಂಟ್ವಾಳ ದಿಂದ ಬರುತ್ತಿದ್ದು, ಕಾಮಾಜೆ ಕ್ರಾಸ್ ಬಳಿ ತಿರುಗಿಸಿದ ವೇಳೆ ಹಿಂಬದಿಯಿಂದ ಕಾರು ಢಿಕ್ಕಿಯಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ಶ್ರೀನಿವಾಸ ಉಡುಪರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಂಭೀರವಾಗಿ ಗಾಯವಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ‌.

ತರು ಅಡುಗೆ ವೃತ್ತಿಯವರಾಗಿದ್ದು,ದೇವಸ್ಥಾನದಲ್ಲಿ ಪರಿಚಾರಕಾಗಿದ್ದರು. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ಪತ್ನಿ, ಪುತ್ರ,ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Leave a Reply

error: Content is protected !!
%d