ಆಟವಾಡುತ್ತಾ ಬಾವಿಗೆ ಬಿದ್ದು ಮಗು ಸಾವು

ಶೇರ್ ಮಾಡಿ

ಆಟವಾಡುತ್ತಾ ಆಕಸ್ಮಿಕವಾಗಿ ಬಾವಿಗೆ ಬಿದ್ದ ಮೂರು ವರ್ಷದ ಮಗು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಸಿ.ಪಿ. ಬಜಾರದಲ್ಲಿ ನಡೆದಿದೆ.

ಅನುಶ್ರೀ ರಾಜಶೇಖರ ಶೆಟ್ಟರ್(2) ಮೃತ ಬಾಲಕಿ. ಈಕೆ ಬಾವಿ ಸಮೀಪ ಆಟವಾಡುತ್ತಿದ್ದ ಮಗು ಆಟವಾಡುತ್ತ ನೇರವಾಗಿ ಬಾವಿಗೆ ಬಿದ್ದಿದ್ದಾಳೆ. ಇದನ್ನು ಗಮನಿಸಿದ ತಾಯಿ ಸಹಾಯಕ್ಕಾಗಿ ಕೂಗಿದ್ದಾರೆ. ಸ್ಥಳೀಯರಾದ ಶಂಭು ಶೆಂಮಡಿ ಎಂಬವರು ಕೂಡಲೇ ಬಾವಿಗೆ ಇಳಿದು ಮಗುವನ್ನು ಹೊರಕ್ಕೆ ತೆಗೆದಿದ್ದಾರೆ. ಆದರೆ ಆಕೆ ಬಾವಿಯಲ್ಲೇ ಉಸಿರುಗಟ್ಟಿ ಮೃತಪಟ್ಟಿದ್ದಾಳೆ.

ಘಟನೆ ಸಂಬಂಧ ನಗರಠಾಣೆ ಪಿಎಸ್‍ಐ ರಾಜಕುಮಾರ ಉಕ್ಕಲಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

Leave a Reply

error: Content is protected !!
%d