ಡೆಂಗ್ಯೂ ಜ್ವರಕ್ಕೆ ನವವಿವಾಹಿತೆ ಬಲಿ

ಶೇರ್ ಮಾಡಿ

ಡೆಂಗ್ಯೂ ಜ್ವರಕ್ಕೆ ನವವಿವಾಹಿತೆಯೊಬ್ಬರು ಬಲಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ರಿಪ್ಪನ್ ಪೇಟೆಯ ಶಬರೀಶನಗರದಲ್ಲಿ ಘಟನೆ ನಡೆದಿದ್ದು, ಮಧುರ (31) ಡೆಂಗ್ಯೂ ಜ್ವರಕ್ಕೆ ತುತ್ತಾಗಿ ಮೃತಪಟ್ಟಿದ್ದಾರೆ. ಈಕೆ ಕಳೆದ ಆರು ತಿಂಗಳ ಹಿಂದೆ ಮಂಜುನಾಥ್ ಎಂಬವರೊಂದಿಗೆ ವಿವಾಹವಾಗಿದ್ದರು. ಕಳೆದ ಒಂದು ವಾರದಿಂದ ಮಧುರ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದರು.

ಅನಾರೋಗ್ಯ ಹಿನ್ನೆಲೆ ಮಧುರ ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಚ್ಚಿನ ಚಿಕಿತ್ಸೆಗೆಂದು ಶಿವಮೊಗ್ಗಕ್ಕೆ ಕರೆ ತರುವ ವೇಳೆ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

Leave a Reply

error: Content is protected !!
%d bloggers like this: