ಕಾಲೇಜು ವಿದ್ಯಾರ್ಥಿ ವೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ

ಶೇರ್ ಮಾಡಿ

ಪುತ್ತೂರು: ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತರನ್ನು ಕುರಿಯ ಪಡ್ಪು ನಿವಾಸಿ, ಪುತ್ತೂರು ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿಕ್ಷೀತ್ (17) ಎಂದು ಗುರುತಿಸಲಾಗಿದೆ. ವೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಘಟನಾ ಸ್ಥಳಕ್ಕೆ ಬಿಜೆಪಿ ಮುಖಂಡ ಬೂಡಿಯಾರ್ ರಾಧಾಕೃಷ್ಣ ರೈ, ಆರ್ಯಪು ಗ್ರಾಮಪಂಚಾಯತ್ ಸದಸ್ಯ ಯಾಕೂಬ್ ಕುರಿಯ ಸಹಿತ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ನೀಡಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ತನಿಖೆಯ ಬಳಿಕ ಸಾವಿನ ನಿಖರ ಕಾರಣ ತಿಳಿದುಬರಬೇಕಿದೆ.

ಮೃತರು ತಂದೆ, ತಾಯಿ, ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ

Leave a Reply

error: Content is protected !!