ರಾಗಿಗುಡ್ಡ ಘಟನೆ ಮಾಸುವ ಮುನ್ನವೇ ಶಿವಮೊಗ್ಗದಲ್ಲಿ ಹಿಂದೂ ಯುವಕನಿಗೆ ಚಾಕು ಇರಿತ

ಶೇರ್ ಮಾಡಿ

ಹಿಂದೂ ಯುವಕನೊಬ್ಬನಿಗೆ ಅನ್ಯ ಕೋಮಿನ ಯುವಕರು ಚಾಕು ಇರಿದಿರುವ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ನಡೆದಿದೆ.

ನಂದಕುಮಾರ (32) ಚಾಕು ಇರಿತಕ್ಕೊಳಗಾದ ಯುವಕ. ಭದ್ರಾವತಿಯ ಹನುಮಂತನಗರದ ಬಡಾವಣೆಯಲ್ಲಿ ಘಟನೆ ನಡೆದಿದೆ. ಚೂರಿಯಿಂದ ಬೆನ್ನಿನ ಮೇಲೆ ಯುವಕರ ಗುಂಪು ಇರಿದಿದ್ದು, ಗಾಯಗೊಂಡ ಯುವಕ ಭದ್ರಾವತಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಅನ್ಯಕೋಮಿನ ಯುವಕರ ಗುಂಪು ನಂದಕುಮಾರ್ ಬಳಿ ಕರೆ ಮಾಡಲು ನಿನ್ನ ಮೊಬೈಲ್ ಕೊಡು ಎಂದು ಕೇಳಿದೆ. ನಂದಕುಮಾರ ಮೊಬೈಲ್ ಕೊಡಲು ನಿರಾಕರಿಸಿದಾಗ ಆತನ ಮೇಲೆ ಪುಂಡರು ಹಲ್ಲೆ ನಡೆಸಿದ್ದರು. ಇದರ ಬಗ್ಗೆ ದೂರು ನೀಡಲು ನಂದಕುಮಾರ ಪೊಲೀಸ್ ಠಾಣೆಗೆ ತೆರಳಿದ್ದು, ಠಾಣೆಯಿಂದ ವಾಪಸ್ ಬರುತ್ತಿದ್ದಾಗ ಚೂರಿಯಿಂದ ಹಲ್ಲೆ ನಡೆಸಿದ್ದಾರೆ.

ನ್ಯಕೋಮಿನ ಯುವಕರಿಂದ ಹಲ್ಲೆ ನಡೆದಿರುವ ಸುದ್ದಿ ತಿಳಿದ ಹಿಂದೂ ಕಾರ್ಯಕರ್ತರು ರಾತ್ರೋರಾತ್ರಿ ಆಸ್ಪತ್ರೆ ಮುಂದೆ ಜಮಾಯಿಸಿದರು. ಪುಂಡರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಶಿವಮೊಗ್ಗದ ರಾಗಿಗುಡ್ಡದಲ್ಲಿ ಉಂಟಾದ ಸನ್ನಿವೇಶದ ಪರಿಣಾಮವಾಗಿ ಶೀಘ್ರವೇ ಎಚ್ಚೆತ್ತುಕೊಂಡಿರುವ ಪೊಲೀಸರು, ತಕ್ಷಣ ಕ್ರಮಕ್ಕೆ ಮುಂದಾಗಿದ್ದಾರೆ. ಎಎಸ್ಪಿ ಅನಿಲಕುಮಾರ ಭೂಮರಡ್ಡಿ ಆಸ್ಪತ್ರೆಗೆ ಭೇಟಿ ನೀಡಿ ಯುವಕನಿಂದ ಮಾಹಿತಿ ಪಡೆದಿದ್ದಾರೆ. ಸ್ಥಳದ ಸಿಸಿಟಿವಿ ಫೂಟೇಜ್‍ಗಳನ್ನು ಪರಿಶೀಲಿಸಲಾಗುತ್ತಿದೆ.

Leave a Reply

error: Content is protected !!
%d