ಸುಬ್ರಹ್ಮಣ್ಯ: ಕಾರಿನ ಗಾಜು ಒಡೆದು ಕಳ್ಳತನ

ಶೇರ್ ಮಾಡಿ

ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಬಂದ ಭಕ್ತಾಧಿಯೋರ್ವರ ಕಾರಿನ ಗಾಜು ಒಡೆದು ಕಳ್ಳತನ ಮಾಡಿರುವ ಘಟನೆ ಸೋಮವಾರ ನಡೆದಿದೆ.

ಸಂಜೆ ಕೆಎಲ್ 60 ಎನ್ 4003 ನೇ ಕಾರಿನಲ್ಲಿ, ತನ್ನ ಚಿಕ್ಕಮ್ಮನೊಂದಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಾಸ್ಥಾನಕ್ಕೆ ತೆರಳಿ ರಥ ಬೀದಿಯ ಪಕ್ಕದಲ್ಲಿರುವ ಪಾರ್ಕಿಂಗ್ ಸ್ಥಳದಲ್ಲಿ ಕಾರನ್ನು ನಿಲ್ಲಿಸಿ ,ದೇವಸ್ಥಾನಕ್ಕೆ ಹೋಗಿ ಪೂಜಾ ಕಾರ್ಯಕ್ರಮ ಮುಗಿಸಿಕೊಂಡು ಸ್ವಲ್ಪ ಸಮಯದ ಬಳಿಕ ಕಾರಿನ ಬಳಿ ಬಂದು ನೋಡಿದಾಗ, ಕಾರಿನ ಹಿಂಬದಿಯ ಗಾಜನ್ನು ಪುಡಿ ಮಾಡಿ ಕಾರಿನಲ್ಲಿದ್ದ ಎರಡು ಬ್ಯಾಗ್ ಗಳನ್ನು ಯಾರೋ ಕಳ್ಳರು ತೆಗೆದುಕೊಂಡು ಹೋಗಿರುವುದು ತಿಳಿದು ಬಂದಿದೆ.

ಕಳುವಾಗಿರುವ ಬ್ಯಾಗ್ ನಲ್ಲಿ ಅಂದಾಜು 14 ಗ್ರಾಂ ತೂಕದ ಚಿನ್ನದ ಬ್ರಾಸ್ ಲೈಟ್ ಹಾಗೂ ಆಧಾರ ಕಾರ್ಡ್ ,ಎಟಿಎಂ, ಇತ್ಯಾದಿ ದಾಖಲಾತಿಗಳಿದ್ದು. ಕಳುವಾದ ಸೊತ್ತಿನ ಅಂದಾಜು ಮೌಲ್ಯ 42,000 ರೂ. ಎಂಬುದಾಗಿ ದೂರಿನಲ್ಲಿ ನೀಡಲಾಗಿದೆ. ಈ ಘಟನೆ ಸಂಬಂಧಪಟ್ಟಂತೆ ಕೇರಳ ನಿವಾಸಿ ಸುಯಿಶ್‌ ಟಿ ಸಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Leave a Reply

error: Content is protected !!
%d bloggers like this: