ನೀಟ್ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ.,ಫೆ.7 ಕ್ಕೆ ಕೊನೆ

ಶೇರ್ ಮಾಡಿ

ನೇಸರ ಜ.31:ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2021ರಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸುಗಳ ಪ್ರವೇಶಾತಿಗೆಂದು ನಡೆಸಿದ್ದ ನೀಟ್ ಪರೀಕ್ಷೆಯನುಸಾರ ಮೊದಲನೇ ಸುತ್ತಿನ ಸೀಟು ಹಂಚಿಕೆ ಕೌನ್ಸಿಲಿಂಗ್ ವೇಳಾಪಟ್ಟಿ ಪ್ರಕಟವಾಗಿದೆ. ಸೀಟ್ ಮ್ಯಾಟ್ರಿಕ್ಸ್ ಮತ್ತು ಶುಲ್ಕ ವಿವರ ಪ್ರಕಟಿಸಲಾಗಿದ್ದು, ದೃಢೀಕರಣ ಚೀಟಿಯನ್ನು ಡೌನ್-ಲೋಡ್ ಮಾಡಿಕೊಳ್ಳುವ ಪ್ರಕ್ರಿಯೆಯೂ ಆರಂಭವಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2021ರಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸುಗಳ ಪ್ರವೇಶಾತಿಗೆಂದು ನಡೆಸಿದ್ದ ನೀಟ್ ಪರೀಕ್ಷೆಯನುಸಾರ ಮೊದಲನೇ ಸುತ್ತಿನ ಸೀಟು ಹಂಚಿಕೆ ಕೌನ್ಸಿಲಿಂಗ್ ವೇಳಾಪಟ್ಟಿ ಪ್ರಕಟವಾಗಿದೆ. ಸೀಟ್ ಮ್ಯಾಟ್ರಿಕ್ಸ್ ಮತ್ತು ಶುಲ್ಕ ವಿವರ ಪ್ರಕಟಿಸಲಾಗಿದ್ದು, ದೃಢೀಕರಣ ಚೀಟಿಯನ್ನು ಡೌನ್-ಲೋಡ್ ಮಾಡಿಕೊಳ್ಳುವ ಪ್ರಕ್ರಿಯೆಯೂ ಆರಂಭವಾಗಿದೆ.

ಮೊದಲ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ

ಸೀಟ್ ಮ್ಯಾಟ್ರಿಕ್ಸ್‌ ಮತ್ತು ಶುಲ್ಕದ ವಿವರಗಳ ಪ್ರಕಟಣೆ29-01-2022
ಇಚ್ಛೆ/ ಆಯ್ಕೆಗಳನ್ನು ದಾಖಲಿಸುವುದು. (ಆದ್ಯತಾ ಕ್ರಮದಲ್ಲಿ)29-01-2022 ರಿಂದ 01-02-2022 ರ ಬೆಳಿಗ್ಗೆ 10-00 ಗಂಟೆವರೆಗೆ.
ಅಣಕು ಸೀಟು ಹಂಚಿಕೆಯ ಫಲಿತಾಂಶ01-02-2022 ರ ಸಂಜೆ 07-00 ಗಂಟೆಗೆ.
ಆಯ್ಕೆಗಳನ್ನು ಬದಲಾಯಿಸಲು ಅವಕಾಶ (ಸೇರಿಸಿ/ ಅಳಿಸಿ / ಬದಲಾಯಿಸಿ / ಮಾರ್ಪಡಿಸಿ)01-02-2022 ರಿಂದ 03-02-2022 ರ ರಾತ್ರಿ 10-00 ಗಂಟೆಗೆ.
ನೈಜ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಣೆ04-02-2022 ರ ಬೆಳಿಗ್ಗೆ 11-00
ಪೋಷಕರ ಜತೆ ಚರ್ಚಿಸಿ ಸೂಕ್ತವಾದ ಚಾಯ್ಸ್‌ ಆಯ್ಕೆ ಮಾಡಲು04-02-2022 ರಿಂದ 06-02-2022 ರ ರಾತ್ರಿ 08-00 ಗಂಟೆ ವರೆಗೆ.
ಚಾಯ್ಸ್‌1, 2 ಆಯ್ಕೆ ಮಾಡಿದ ಅಭ್ಯರ್ಥಿಗಳು ಶುಲ್ಕ ಪಾವತಿ ಮಾಡುವುದು04-02-2022 ರಿಂದ 07-02-2022 ರ ಮಧ್ಯಾಹ್ನ 01 ಗಂಟೆವರೆಗೆ.
ಚಾಯ್ಸ್‌1 ಸೆಲೆಕ್ಟ್‌ ಮಾಡಿದ ಅಭ್ಯರ್ಥಿಗಳು ಮೂಲ ದಾಖಲೆಗಳನ್ನು ಸಲ್ಲಿಸುವುದು05-02-2022 ರಿಂದ 07-02-2022 ರ ಸಂಜೆ 04-00 ಗಂಟೆವರೆಗೆ.
ಎಲ್ಲ ದೃಢೀಕೃತ ದಾಖಲೆಗಳನ್ನು ಸಲ್ಲಿಸಲು ಕೊನೆ ದಿನಾಂಕ :07-02-2022 ರ ಸಂಜೆ 05-30 ರವರೆಗೆ.

ಈ ಬಗ್ಗೆ ಪ್ರಾಧಿಕಾರವು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಫೆ.4ರಂದು ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸುಗಳಿಗೆ ಮೊದಲ ಸುತ್ತಿನ ಸೀಟು ಹಂಚಿಕೆಯನ್ನು ಪ್ರಕಟಿಸಲಾಗುವುದು. ಇದಕ್ಕೂ ಮೊದಲು ಫೆ.1ರ ಬೆಳಿಗ್ಗೆ 10 ಗಂಟೆಯವರೆಗೆ ವಿದ್ಯಾರ್ಥಿಗಳಿಗೆ ತಮ್ಮ ಇಷ್ಟದ ಐಚ್ಛಿಕ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಲು ಮತ್ತು ಫೆ.1ರಿಂದ 3ರ ಬೆಳಿಗ್ಗೆ 10 ಗಂಟೆಯವರೆಗೆ ತಮ್ಮ ಐಚ್ಛಿಕ ವಿಷಯಗಳಲ್ಲಿ ಅಗತ್ಯವೆನಿಸಿದರೆ ಬದಲಾವಣೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ.

ಬಳಿಕ ಚಾಯ್ಸ್-1 ಮತ್ತು ಚಾಯ್ಸ್-2 ಸ್ತರದ ವಿದ್ಯಾರ್ಥಿಗಳು ನಿಗದಿತ ಶುಲ್ಕ ತುಂಬಿ, ಪ್ರವೇಶ ದಾಖಲಾತಿಯನ್ನು ಡೌನ್-ಲೋಡ್ ಮಾಡಿಕೊಳ್ಳಲು ಫೆ.4ರ ಮಧ್ಯಾಹ್ನ 2 ಗಂಟೆಯಿಂದ ಫೆ.7ರ ಮಧ್ಯಾಹ್ನ 1 ಗಂಟೆಯವರೆಗೆ ಅವಕಾಶವಿರುತ್ತದೆ. ನಂತರ, ವಿದ್ಯಾರ್ಥಿಗಳು ಒಂದು ಸೆಟ್ ದೃಢೀಕೃತ ಪ್ರಮಾಣಪತ್ರಗಳೊಂದಿಗೆ ಮೂಲ ದಾಖಲೆಗಳನ್ನು ಫೆ.5ರಿಂದ 7ರ ಒಳಗೆ ಬೆಂಗಳೂರಿನಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಪರಿಶೀಲನೆಗೆ ಸಲ್ಲಿಸಬೇಕು.

Leave a Reply

error: Content is protected !!