ವೇಣೂರು ಶ್ರೀ ಬಾಹುಬಲಿ ಕ್ಷೇತ್ರದ ಪರಿಸರದಲ್ಲಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಜಿನ ಭಜನಾ ಸ್ಪರ್ಧೆಗೆ ತರಬೇತಿ ಪಡೆಯುತ್ತಿದ್ದಾಗ ವ್ಯಕ್ತಿಯೊರ್ವ ಸ್ಥಳಕ್ಕೆ ತೆರಳಿ ಅವಾಚ್ಯ ಶಬ್ದಗಳಿಂದ ಬೈದಿರುವುದಲ್ಲದೆ, ಮಚ್ಚು ತೋರಿಸಿ ಜೀವ ಬೆದರಿಕೆ ಹಾಕಿರುವುದಾಗಿ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ಸಂಬಂಧ ಮುಂಡೂರಿನ ಆನಂದ ಆಚಾರ್ಯ(38 ವರ್ಷ) ಎಂಬಾತ ಮೇಲೆ ಪ್ರಕರಣ ದಾಖಲಾಗಿದೆ.
ಈತ ವೇಣೂರು ಬಾಹುಬಲಿ ಕ್ಷೇತ್ರದಲ್ಲಿ ವಲಯ ಮಟ್ಟದ ಜಿನ ಭಜನಾ ಸ್ಪರ್ಧೆಗೆ ಮಹಿಳೆಯರು, ಮಕ್ಕಳು ಸೇರಿ ಸುಮಾರು 70 ಮಂದಿ ಅಭ್ಯಾಸ ನಡೆತ್ತಿದ್ದರು. ಈ ವೇಳೆ ಪ್ರವಾಸಿಗರೂ ಕೂಡ ಇದ್ದರು. ಈ ಸಂದರ್ಭ ಅಲ್ಲಿಗೆ ತೆರಳಿದ ಆರೋಪಿ ಮಚ್ಚು ತೋರಿಸಿ, ಬೆದರಿಕೆ ಹಾಕಿದ್ದಾನೆ.
ಕೂಡಲೇ ಸ್ಥಳೀಯರು ವೇಣೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಚ್ಙನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.