ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಎನ್ನೆನ್ನೆಸ್ ವಾರ್ಷಿಕ ಶಿಬಿರಕ್ಕೆ ವಿಭಾಗಾಧಿಕಾರಿ ಭೇಟಿ

ಶೇರ್ ಮಾಡಿ

ಪೆರಿಂಜೆ : ಪೆರಿಂಜೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ ನಡೆಯುತ್ತಿರುವ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರಕ್ಕೆ ದ.ಕ, ಉಡುಪಿ ಹಾಗೂ ಕೊಡಗು ಜಿಲ್ಲೆಯನ್ನೊಳಗೊಂಡ ರಾಷ್ಟ್ರೀಯ ಸೇವಾ ಯೋಜನೆಯ ಮಂಗಳೂರು ವಿಭಾಗಾಧಿಕಾರಿ ಸವಿತಾ ಎರ್ಮಾಳ್ ಅವರು ಭೇಟಿ ನೀಡಿ ವಿದ್ಯಾರ್ಥಿ ಸ್ವಯಂ ಸೇವಕರನ್ನು ಉದ್ದೇಶಿಸಿ ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವದ ಬಗ್ಗೆ, ಧ್ಯೇಯ ಉದ್ದೇಶಗಳ ಬಗ್ಗೆ ಮಾತನಾಡಿದರು.

ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಇಲ್ಲಿನ ಶ್ರೀ ಧ.ಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಮುಕುಂದಚಂದ್ರ ಅವರು ಸನ್ಮಾನ ಮಾಡಿದರು.

ಘಟಕ ನಾಯಕರಾದ ಸುದರ್ಶನ ನಾಯಕ್ ಹಾಗೂ ದಕ್ಷಾ ಅವರು ಅನುಭವದ ಅಭಿಪ್ರಾಯ ಮಂಡಿಸಿದರು.

ಸ್ವಯಂ ಸೇವಕಿ ಹರ್ಷಿತಾ ಪರಿಚಯಿಸಿದರು. ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಗೌರವಿಸಿದರು. ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ನಿರೂಪಿಸಿ ವಂದಿಸಿದರು.

Leave a Reply

error: Content is protected !!
%d bloggers like this: