ಮಕ್ಕಳೊಂದಿಗೆ ತಾಯಿ ನಾಪತ್ತೆ

ಶೇರ್ ಮಾಡಿ

ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರು ನಿವಾಸಿ ಅಕ್ಷತಾ (25) ಎಂಬ ಮಹಿಳೆಯು ತನ್ನ ಇಬ್ಬರು ಹೆಣ್ಣುಮಕ್ಕಳಾದ ವಿದ್ಯಾಶ್ರೀ (7) ಹಾಗೂ ಮಲ್ಲು (4)ರೊಂದಿಗೆ ಅ.6 ರಂದು ಬೆಳಗ್ಗೆ 8 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

ಅಕ್ಷತಾ 5 ಅಡಿ ಎತ್ತರ, ಸಾಧಾರಣ ಶರೀರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ಹಿಂದಿ, ತೆಲುಗು ಹಾಗೂ ತುಳು ಭಾಷೆ ಮಾತನಾಡುತ್ತಾರೆ. ವಿದ್ಯಾಶ್ರೀ 3 ಅಡಿ 6 ಇಂಚು ಎತ್ತರ, ಸಪೂರ ಶರೀರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾಳೆ. ಮಲ್ಲು 3 ಅಡಿ ಎತ್ತರ, ಸಾಧಾರಣ ಶರೀರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾಳೆ. ಇವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Leave a Reply

error: Content is protected !!
%d