ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಸಮಾಜ ಕಲ್ಯಾಣ ಇಲಾಖೆ ಸಹಾಯಕ‌ ನಿರ್ದೇಶಕ

ಶೇರ್ ಮಾಡಿ

ಲಂಚಕ್ಕೆ ಬೇಡಿಕೆಯಿಟ್ಟಿದ್ದ ಸಮಾಜ ಕಲ್ಯಾಣ ಇಲಾಖೆ ಸಹಾಯಕ‌ ನಿರ್ದೇಶಕರೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ಶುಕ್ರವಾರ ನಡೆದಿದೆ.

15 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಶಿವಮೊಗ್ಗ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಿನಾಥ್ ಅವರು ಲೋಕಾಯುಕ್ತರ ಕೈಗೆ ಸಿಕ್ಕಬಿದ್ದ ಅಧಿಕಾರಿ.

ಬುಕ್ಲಾಪುರ ಸ್ಮಶಾನ ಅಭಿವೃದ್ಧಿ ಕಾಮಗಾರಿ ಹಣ ಬಿಡುಗಡೆಗೆ ಸ್ಥಳ ಪರಿಶೀಲಿಸಿ, ರಿಪೋರ್ಟ್ ನೀಡಲು ಗೋಪಿನಾಥ್ 15 ಸಾವಿರ ಬೇಡಿಕೆ ಇಟ್ಟಿದ್ದರು. ದೂರುದಾರನಿಂದ 15 ಸಾವಿರ ಹಣ ಪಡೆದುಕೊಳ್ಳುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಡಿವೈಎಸ್ಪಿ ಈಶ್ವರ್ ಉಮೇಶ್ ನಾಯ್ಕ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

Leave a Reply

error: Content is protected !!
%d