ನಾಡಹಬ್ಬ, ವಿಶ್ವವಿಖ್ಯಾತ ಮೈಸೂರು ದಸರಾಗೆ ಸಂಗೀತ ನಿರ್ದೇಶಕ ಹಂಸಲೇಖ ಅವರು ಚಾಲನೆ ನೀಡಿದ್ದಾರೆ. ಚಾಮುಂಡಿಬೆಟ್ಟದಲ್ಲಿ, ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಹೆ.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್, ವೆಂಕಟೇಶ್, ಮುನಿಯಪ್ಪ ಶಿವರಾಜ್ ತಂಗಡಗಿ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಜಿ ಟಿ ದೇವೇಗೌಡ, ರವಿಶಂಕರ್, ಎ.ಆರ್.ಕೃಷ್ಣಮೂರ್ತಿ, ಶ್ರೀವತ್ಸ, ಹರೀಶ್ ಗೌಡ, ತನ್ವೀರ್ ಸೇಠ್, ಅನಿಲ್ ಚಿಕ್ಕಮಾದು, ಮೇಯರ್ ಶಿವಕುಮಾರ್ ಉಪಸ್ಥಿತರಿದ್ದರು.