ಕಳೆಂಜ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ದೇವರ ಚಿನ್ನಾಭರಣ ನಾಪತ್ತೆ: ದೂರು

ಶೇರ್ ಮಾಡಿ

ಪೆರ್ನೆಯ ಕಳೆಂಜ- ದೇಂತಡ್ಕದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ದೇವರಿಗೆ ಸಮರ್ಪಿಸಲಾದ ಚಿನ್ನಾಭರಣಗಳು ನಾಪತ್ತೆಯಾಗಿರುವುದು ಅ.15ರಂದು ಬೆಳಕಿಗೆ ಬಂದಿದ್ದು, ಈ ಬಗ್ಗೆ ದೇವಾಲಯದ ಮಾಜಿ ಕಾರ್ಯದರ್ಶಿ ಗೋಪಾಲ ಶೆಟ್ಟಿ ಎನ್. ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಕಳೆದ ಡಿಸೆಂಬರ್ ನಲ್ಲಿ ದೇವಾಲಯದ ಬ್ರಹ್ಮಕಲಶಾಭಿಷೇಕ ನಡೆದಿದ್ದು, ಈ ವೇಳೆ ಭಕ್ತಾರೊಬ್ಬರು ಸುಮಾರು ಮೂರು ಮುಕ್ಕಾಲು ಪವನಿನ ಐದು ಎಳೆಗಳಿಂದ ಕೂಡಿದ ಚಿನ್ನದ ಜೋ ಮಾಲೆಯನ್ನು ಸಮರ್ಪಿಸಿದ್ದರು. ಇದಲ್ಲದೆ ಎರಡು ಪವನಿನ ಇನ್ನೊಂದು ಚಿನ್ನದ ಸರವೂ ನಾಪತ್ತೆಯಾಗಿದೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

ಸರಕಾರ ದೇವಾಲಯಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಿದ್ದು, ಅಧಿಕಾರ ಸ್ವೀಕರಿಸಿದ ಅವರು ಅ.15ರಂದು ಭಕ್ತಾದಿಗಳ ಸಮ್ಮುಖದಲ್ಲಿ ಮಹಜರು ನಡೆಸಿದಾಗ ಚಿನ್ನದ ಸರಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿವೆ. ಈ ಕುರಿತು ಪೊಲೀಸ್ ದೂರು ನೀಡಿರುವ ದೇವಾಲಯದ ಮಾಜಿ ಕಾರ್ಯದರ್ಶಿ ಗೋಪಾಲ ಶೆಟ್ಟಿ, ಕಬ್ಬಿಣದ ಕಪಾಟನ್ನು ದೇವಾಲಯದ ಕಾರ್ಯಾಲಯದಿಂದ ಕಳವುಗೈದು ಅದನ್ನು ಒಡೆದು ಅದರಲ್ಲಿದ್ದ ದಾಖಲೆಪತ್ರಗಳನ್ನು ನಾಶ ಮಾಡಲಾಗಿದೆ. ಆ ಖಾಲಿ ಕಪಾಟು ಭದ್ರತಾ ಕೊಠಡಿಯಲ್ಲಿರುವುದು ಇಂದು ಕಂಡು ಬಂದಿದೆ. ಭದ್ರತಾ ಕೊಠಡಿಯ ಕೀಲಿಕೈಯನ್ನು ಅನಧಿಕೃತವಾಗಿ ಹುಟ್ಟು ಹಾಕಿದ ಖಾಸಗಿ ಟ್ರಸ್ಟ್ ಮತ್ತು ಅದಕ್ಕೆ ಪೂರಕವಾದ ಸಮಿತಿಗೆ ದೇವಾಲಯದ ಮಾಜಿ ಅಧ್ಯಕ್ಷ ರೋಹಿತಾಕ್ಷ ಬಾಣಬೆಟ್ಟು, ಟಸ್ಟ್ ಅಧ್ಯಕ್ಷ ಭರತ್ ಕುಮಾರ್ ಆರಿಗ ಪಟ್ಟೆಗುತ್ತು, ಪಡ್ನೂರು ಗ್ರಾಮದ ಅವಿನಾಶ್ ಜೈನ್ ಪರಂಗಾಜೆ ಹಾಗೂ ಇದಕ್ಕೆ ಪೂರಕವಾದ ಸಮಿತಿಯ ಸದಸ್ಯರು ಇದಕ್ಕೆ ಕಾರಣಕರ್ತರಾಗಿದ್ದು, ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Leave a Reply

error: Content is protected !!
%d