ವಿದ್ಯಾರ್ಥಿಗೆ ರಾತ್ರಿ ವೇಳೆ ಅಶ್ಲೀಲ ವಿಡಿಯೋ ಕಳುಹಿಸಿ ಶಿಕ್ಷಕಿ, ದೈಹಿಕ ಸಂಪರ್ಕ ಮಾಡುವಂತೆ ಒತ್ತಡ ಮಾಡಿದ ಆರೋಪ….!

ಶೇರ್ ಮಾಡಿ

ಹತ್ತನೇ ತರಗತಿ ಓದುತ್ತಿರುವ ವಿದ್ಯಾರ್ಥಿಗೆ ಶಿಕ್ಷಕಿಯೊಬ್ಬರು ನಡುರಾತ್ರಿ ಅಶ್ಲೀಲ ವಿಡಿಯೋ ಕಳುಹಿಸಿ ತನ್ನೊಂದಿಗೆ ದೈಹಿಕ ಸಂಬಂಧ ಬೆಳೆಸುವಂತೆ ಒತ್ತಾಯ ಮಾಡಿದ ಆರೋಪವೊಂದು ಉತ್ತರ ಪ್ರದೇಶದ ಕಾನ್ಪುರದಲ್ಲಿ ವರದಿಯಾಗಿದೆ. ಈ ಸಂಬಂಧ ಪೋಷಕರು ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.

ಕಾನ್ಪುರದ ಕ್ಯಾಂಟ್ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯೊಂದರ ಶಿಕ್ಷಕಿಯ ವಿರುದ್ದ ಈ ಆರೋಪ ಕೇಳಿಬಂದಿದೆ. 10ನೇ ತರಗತಿ ಓದುವ ವಿದ್ಯಾರ್ಥಿಗಳಿಗೆ ದೈಹಿಕ ಸಂಪರ್ಕ ಬೆಳೆಸುವಂತೆ ಒತ್ತಡ ಹೇರಿದ್ದಾಳೆ ಶಿಕ್ಷಕಿ ಎಂದು ವಿದ್ಯಾರ್ಥಿಯ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಶಾಲೆಯಲ್ಲಿ ಪಾಠ ಮಾಡುವ ಟೀಚರ್‍ ನಮ್ಮ ಮಗನನ್ನು ಪ್ರೀತಿಸು, ಲೈಂಗಿಕ ಸಂಪರ್ಕಕ್ಕಾಗಿ ಒತ್ತಡ ಹೇರುತ್ತಿದ್ದಾರೆ. ಜೊತೆಗೆ ಶಿಕ್ಷಕಿ ನಡುರಾತ್ರಿಯ ಸಮಯದಲ್ಲಿ ಅಶ್ಲೀಲ ಸಂದೇಶಗಳನ್ನು ರವಾನೆ ಮಾಡುತ್ತಿದ್ದಾರೆ. ಅಷ್ಟೇಅಲ್ಲದೇ ಲೈಂಗಿಕ ಸಂಬಂಧದ ಜೊತೆಗೆ ವಿದ್ಯಾರ್ಥಿಯನ್ನು ಮತಾಂತರಕ್ಕೆ ಸಹ ಒತ್ತಡ ಏರುತ್ತಿದ್ದಾರೆ ಎಂದು ವಿದ್ಯಾರ್ಥಿಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ.

ಇನ್ನೂ ಈ ಬಗ್ಗೆ ಶಿಕ್ಷಕಿಯನ್ನು ನೇರವಾಗಿ ಕೇಳಲಾಗಿ, ಆಕೆ ಸಹ ಒಪ್ಪಿಕೊಂಡಿದ್ದಾರೆ. ಜೊತೆಗೆ ಈ ವಿಷಯವನ್ನು ಆಕೆಯ ಕುಟುಂಬದ ಗಮನಕ್ಕೆ ತರುವ ಪ್ರಯತ್ನವನ್ನು ಸಹ ಮಾಡಲಾಗಿದೆ ಎಂದು ಹೇಳಲಾಗಿದೆ. ಆರೋಪಿ ಶಿಕ್ಷಕಿಯ ಪತಿ ಹಾಗೂ ಆಕೆಯ ಸಹೋದರ ಸಹ ಇದೇ ಶಾಲೆಯಲ್ಲಿ ಕೆಲಸ ಮಾಡುತ್ತಾರೆ. ಆದ್ದರಿಂದ ಶಿಕ್ಷಕಿಯ ಕಡೆಯಿಂದ ನಮ್ಮ ಕುಟುಂಬಕ್ಕೆ ಹಾನಿಯಾಗುವ ಸಾಧ್ಯತೆಯಿದೆ. ಈ ಕುರಿತು ತನಿಖೆ ನಡೆಸಿ ಕಾನೂನು ರೀತ್ಯ ಕ್ರಮ ತೆಗೆದುಕೊಳ್ಳಬೇಕೆಂದು ವಿದ್ಯಾರ್ಥಿಯ ತಂದೆ ದೂರಿನ ಮೂಲಕ ಕೋರಿದ್ದಾರೆ.

ಈ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ. ದೂರಿನಲ್ಲಿ ಸತ್ಯಾಂಶ ಕಂಡು ಬಂದರೇ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

Leave a Reply

error: Content is protected !!
%d