ಕ್ರಿಕೆಟ್ ಬೆಟ್ಟಿಂಗ್ ; ಮೂವರ ಬಂಧನ

ಶೇರ್ ಮಾಡಿ

ಮೂಡುಬಿದಿರೆ ಮಾರ್ಪಾಡಿ ಗ್ರಾಮದ ಅಲಂಗಾರು ಎಂಬಲ್ಲಿ ಅಕ್ಟೋಬರ್ 16 ರಂದು ಸಂಜೆ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ಬೆಳುವಾಯಿ ಗ್ರಾಮದ ನವೀದ್ (30), ಪಡುಮಾರ್ನಾಡು ಗ್ರಾಮದ ಬಸವನಕಜೆಯ ಉಮೇಶ್ (40) ಮತ್ತು ಪದವು ದರ್ಕಾಸು ಮನೆ ನಿವಾಸಿ ಪ್ರಸಾದ್ ದೇವಾಡಿಗ (35) ಎನ್ನುವವರಾಗಿದ್ದಾರೆ.

ನವೀದ್ ಎಂಬಾತ ಪ್ರಸಾದ್ ಮತ್ತು ಉಮೇಶ್ ಎಂಬುವರಿಂದ ಹಣವನ್ನು ಪಡೆದು ಮೊಬೈಲ್ ವೆಬ್ ಸೈಟ್ ನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯಂತೆ ಸ್ಥಳಕ್ಕೆ ದಾಳಿ ನಡೆಸಲಾಗಿದೆ.

ಶ್ರೀಲಂಕಾ ಮತ್ತು ಆಸ್ಪ್ರೇಲಿಯಾ ಪಂದ್ಯಕ್ಕೆ ಬೆಟ್ಟಿಂಗ್ ಮಾಡಲು ಹಣವನ್ನು ಗೂಗಲ್ ಪೇ ಅಥವಾ ಪೋನ್ ಪೇ ಮುಖೇನ ಪಡೆಯುತ್ತಿದ್ದ ಬಗ್ಗೆ ತಿಳಿದುಬಂದಿದೆ. ತಾವು ಬೆಟ್ಟಿಂಗ್ ನಲ್ಲಿ ತೊಡಗಿಸಿಕೊಳ್ಳುತ್ತಿದ್ದ Comfort Zone 247 ಎಂಬ ವೆಬ್ ಸೈಟ ನ್ನು ಮುಂಬೈನಲ್ಲಿರುವ ವ್ಯಕ್ತಿ ನಿಯಂತ್ರಣ ಮಾಡುತ್ತಿದ್ದಾನೆಂದು ತಿಳಿಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್,ರವರ ಮಾರ್ಗದರ್ಶನದಂತೆ, DCP ಸಿದ್ದಾರ್ಥ ಗೊಯಲ್, DCP ದಿನೇಶ್ ಕುಮಾರ್ ಮತ್ತು ಮಂಗಳೂರು ಉತ್ತರ ಉಪ ವಿಭಾಗದ ACP ಮನೋಜ್ ಕುಮಾರ್ ನಾಯ್ಕ್ ರವರ ನಿರ್ದೇಶನದಲ್ಲಿ ಮೂಡುಬಿದಿರೆ ಠಾಣಾ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ, ಸಿಬಂದಿಗಳಾದ ಚಂದ್ರಹಾಸ್ ರೈ, ಮೊಹಮ್ಮದ್ ಹುಸೇನ್, ಅಖೀಲ್ ಅಹ್ಮದ್ ಹಾಗೂ ತಂಡ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.

Leave a Reply

error: Content is protected !!
%d