ಪ್ರತಿ ಕಿಸ್​ಗೆ ಹೆಚ್ಚುವರಿ 20 ಲಕ್ಷ ರೂಪಾಯಿ ಸಂಭಾವನೆ ಪಡೆಯುತ್ತಾರಾ ನಟಿ ರಶ್ಮಿಕಾ ಮಂದಣ್ಣ?

ಶೇರ್ ಮಾಡಿ

ನಟಿ ರಶ್ಮಿಕಾ ಮಂದಣ್ಣ ಅವರು ಬಾಲಿವುಡ್​ನಲ್ಲಿ ಒಳ್ಳೊಳ್ಳೆಯ ಆಫರ್​ ಪಡೆಯುತ್ತಿದ್ದಾರೆ. ಅದಕ್ಕೆ ತಕ್ಕಂತೆ ಅವರಿಗೆ ಕೋಟ್ಯಂತರ ರೂಪಾಯಿ ಸಂಭಾವನೆ ಕೂಡ ಸಿಗುತ್ತಿದೆ. ಅಮಿತಾಭ್​ ಬಚ್ಚನ್​, ಸಿದ್ದಾರ್ಥ್​ ಮಲ್ಹೋತ್ರಾ ಅವರಂತಹ ಸ್ಟಾರ್​ ಹೀರೋಗಳ ಜೊತೆ ನಟಿಸಿ ರಶ್ಮಿಕಾ ಸೈ ಎನಿಸಿಕೊಂಡಿದ್ದಾರೆ. ಈಗ ಅವರು ರಣಬೀರ್​ ಕಪೂರ್​ ಜೊತೆ ನಟಿಸಿರುವ ‘ಅನಿಮಲ್​’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಮತ್ತು ರಣಬೀರ್​ ಕಪೂರ್​ ಅವರು ಲಿಪ್​ ಲಾಕ್​ ಮಾಡಿದ್ದಾರೆ. ಈ ದೃಶ್ಯಗಳಿಗೆ ರಶ್ಮಿಕಾ ಹೆಚ್ಚುವರಿ ಹಣ ಪಡೆದಿದ್ದಾರೆ ಎಂಬ ಗಾಸಿಪ್​ ಹಬ್ಬಿದೆ. ಆದರೆ ಅದನ್ನು ರಶ್ಮಿಕಾ ಮಂದಣ್ಣ ಅವರ ಆಪ್ತರು ತಳ್ಳಿ ಹಾಕಿದ್ದಾರೆ ಎಂದು ಕೂಡ ಮಾಧ್ಯಮಗಳಲ್ಲಿ ವರದಿ ಆಗಿದೆ.

ಕೆಲವೇ ದಿನಗಳ ಹಿಂದೆ ‘ಅನಿಮಲ್​’ ಸಿನಿಮಾದ ಹೊಸ ಹಾಡು ಬಿಡುಗಡೆ ಆಯಿತು. ಅದರ ಪೋಸ್ಟರ್​ನಲ್ಲಿ ಹೆಚ್ಚು ಹೈಲೈಟ್​ ಆಗಿದ್ದೇ ರಶ್ಮಿಕಾ ಮಂದಣ್ಣ ಮತ್ತು ರಣಬೀರ್​ ಕಪೂರ್​ ಅವರ ಕಿಸ್​. ಈ ಹಾಡಿನಲ್ಲಿ ಅವರಿಬ್ಬರು ಹಲವು ಬಾರಿ ಲಿಪ್​ ಲಾಕ್​ ಮಾಡಿಕೊಂಡಿದ್ದಾರೆ. ಪ್ರತಿ ಲಿಪ್​ ಕಿಸ್​ಗೆ ರಶ್ಮಿಕಾ ಅವರು 20 ಲಕ್ಷ ರೂಪಾಯಿ ಹೆಚ್ಚುವರಿ ಹಣ ಪಡೆಯುತ್ತಾರೆ ಎಂದು ಗಾಸಿಪ್​ ಹಬ್ಬಿಸಲಾಗಿದೆ. ಇದನ್ನು ಕೇಳಿ ಅಭಿಮಾನಿಗಳು ಶಾಕ್​ ಆಗಿದ್ದರು. ಆದರೆ ಆ ರೀತಿ ಯಾವುದೇ ಹೆಚ್ಚುವರಿ ಹಣವನ್ನು ರಶ್ಮಿಕಾ ಅವರು ಪಡೆಯುತ್ತಿಲ್ಲ ಎಂದು ಆಪ್ತ ಮೂಲಗಳು ಸ್ಪಷ್ಟನೆ ನೀಡಿರುವುದಾಗಿ ತೆಲುಗಿನ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟ ಆಗಿದೆ.

ಸಂದೀಪ್​ ರೆಡ್ಡಿ ವಂಗಾ ಅವರು ‘ಅನಿಮಲ್​’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಟೀಸರ್​ ಬಿಡುಗಡೆಯಾಗಿ ಗಮನ ಸೆಳೆಯುತ್ತಿದೆ. ಎರಡು ಶೇಡ್​ನ ಪಾತ್ರದಲ್ಲಿ ರಣಬೀರ್​ ಕಪೂರ್ ನಟಿಸಿದ್ದಾರೆ. ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ. ಅನಿಲ್​ ಕಪೂರ್​, ಸನ್ನಿ ಡಿಯೋಲ್​ ಮುಂತಾದವರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಆ ಎಲ್ಲ ಕಾರಣಕ್ಕಾಗಿ ‘ಅನಿಮಲ್​’ ಸಿನಿಮಾದ ಮೇಲೆ ನಿರೀಕ್ಷೆ ಮೂಡಿದೆ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಅನಿಮಲ್​’ ಚಿತ್ರ ಈಗಾಗಲೇ ಬಿಡುಗಡೆ ಆಗಿರಬೇಕಿತ್ತು. ಆದರೆ ಕಾರಣಾಂತರಗಳಿಂದ ಚಿತ್ರದ ಬಿಡುಗಡೆ ದಿನಾಂಕ ಮುಂದೂಡಿಕೆ ಆಯಿತು. ಡಿಸೆಂಬರ್​ 1ರಂದು ಈ ಸಿನಿಮಾ ರಿಲೀಸ್​ ಆಗಲಿದೆ. ‘ಅರ್ಜುನ್​ ರೆಡ್ಡಿ’, ‘ಕಬೀರ್​ ಸಿಂಗ್​’ ಸಿನಿಮಾಗಳ ಸಕ್ಸಸ್​ ನಂತರ ಸಂದೀಪ್​ ರೆಡ್ಡಿ ವಂಗಾ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿರುವುದರಿಂದ ಸಜಹವಾಗಿಯೇ ಹೈಪ್​ ಕ್ರಿಯೇಟ್​ ಆಗಿದೆ.

Leave a Reply

error: Content is protected !!