ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆ, ಹವಾಮಾನ ಇಲಾಖೆ ಮುನ್ಸೂಚನೆ

ಶೇರ್ ಮಾಡಿ

ಅರಬ್ಬಿ ಸಮುದ್ರದ ಲಕ್ಷದ್ವೀಪದ ಪ್ರದೇಶದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದು ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆ ಇದೆ. ಇದರಿಂದ ಕರಾವಳಿ ಕರ್ನಾಟಕ ರಾಜ್ಯದಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಂಗಳವಾರ ತಿಳಿಸಿದೆ. ಕರಾವಳಿ ಪ್ರದೇಶದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಂಗಳವಾರ ಮಧ್ಯಾಹ್ನದ ನಂತರ ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ.

ಅಕ್ಟೋಬರ್ 16 ರಂದು ಸೋಮವಾರ ಸಂಜೆ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ಮತ್ತು ಮಂಗಳೂರಿನಲ್ಲಿ ಭಾರೀ ಮಳೆ ಸುರಿದಿತ್ತು.

ಚಂಡಮಾರುತ ಸಾಧ್ಯತೆ ಹಿನ್ನೆಲೆಯಲ್ಲಿ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ನವ ಮಂಗಳೂರು ಬಂದರು ಪ್ರಾಧಿಕಾರ (ಎನ್‌ಎಂಪಿಎ) ಹಡಗುಗಳು, ಬಂದರು ಬಳಕೆದಾರರಿಗೆ ಸೂಚನೆ ನೀಡಲಾಗಿದೆ. ಪರಿಣಾಮವಾಗಿ ಎನ್‌ಎಂಪಿಎನಲ್ಲಿ ಎಲ್ಲಾ ಕಾರ್ಯಾಚರಣೆಗಳು ಸ್ಥಗಿತಗೊಳ್ಳಲಿವೆ.

ಇಂದೂ (ಮಂಗಳವಾರ) ಸಹ ಮಂಗಳೂರು, ಬಂಟ್ವಾಳ, ಪುತ್ತೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಭಾರೀ ಮಳೆಯಾಗಿದೆ. ಹಲವೆಡೆ ಗುಡುಗು, ಸಿಡಿಲಿನ ಅಬ್ಬರ ಜೋರಾಗಿತ್ತು.

Leave a Reply

error: Content is protected !!