ಹಿಟ್ & ರನ್ – ಸಾವು ಬದುಕಿನ ಹೋರಾಟದಲ್ಲಿ ವೃದ್ಧೆ

ಶೇರ್ ಮಾಡಿ

ರಸ್ತೆ ದಾಟುತ್ತಿದ್ದ ವೃದ್ಧೆಗೆ ಬೈಕ್ ಸವಾರನೊಬ್ಬ ಡಿಕ್ಕಿ ಹೊಡೆಸಿ ಪರಾರಿಯಾಗಿರುವ ಘಟನೆ ಹಾಸನದ ಹೊಸಲೈನ್ ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿತೀವ್ರ ಗಾಯಗೊಂಡಿರುವ ವೃದ್ಧೆ ನಿಂಗಜಮ್ಮ (82) ಸಾವು ಬದುಕಿನ ನಡುವೆ ಹೋರಾಟದಲ್ಲಿದ್ದಾರೆ.

ವೃದ್ಧೆ ರಸ್ತೆ ದಾಟುತ್ತಿದ್ದ ವೇಳೆ ಬೈಕ್‍ನಲ್ಲಿ ಬಂದ ಯುವಕ ಅಜಾಗರೂಕ ಚಾಲನೆಯಿಂದ ನಿಂಗಜಮ್ಮನಿಗೆ ಡಿಕ್ಕಿ ಹೊಡೆಸಿದ್ದಾನೆ. ಈ ವೇಳೆ ಆತ ಬೈಕ್ ನಿಲ್ಲಿಸದೇ ಪರಾರಿಯಾಗಿದ್ದಾನೆ.

ಎದುರಿನಿಂದ ಬಂದ ಇನ್ನೊಂದು ಬೈಕ್‍ನ ಸವಾರರಿಬ್ಬರು ರಸ್ತೆಯಲ್ಲಿ ಬಿದ್ದಿದ್ದ ವೃದ್ಧೆಯನ್ನು ಎತ್ತಿ ಉಪಚರಿಸಿದ್ದಾರೆ. ಬಳಿಕ ಸ್ಥಳೀಯರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ತೀವ್ರವಾಗಿ ಗಾಯಗೊಂಡಿರುವ ವೃದ್ಧೆಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ನಂತರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಚಿಕಿತ್ಸೆಗೆ ಸ್ಪಂದಿಸದ ಕಾರಣ ಮನೆಗೆ ವಾಪಾಸ್ ಕರೆ ತರಲಾಗಿದೆ. ಈ ಸಂಬಂಧ ಪೆನ್‍ಷನ್‍ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!