ಸಂಜೀವ ಕಬಕ ಅವರಿಗೆ ಕೆಂಗಲ್ ಹನುಮಂತಯ್ಯ ರಾಜ್ಯ ಪ್ರಶಸ್ತಿ ಪ್ರದಾನ

ಶೇರ್ ಮಾಡಿ

ಸಮರ್ಥ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ನೀಡುವ ಪ್ರಸಕ್ತ ಸಾಲಿನ ಕೆಂಗಲ್ ಹನುಮಂತಯ್ಯ ರಾಜ್ಯ ಪ್ರಶಸ್ತಿಗೆ ಆಯ್ಕೆಗೊಂಡ ಸಂಜೀವ ಕಬಕ ಅವರಿಗೆ ಬೆಂಗಳೂರಿನ ಶೇಷಾದ್ರಿಪುರಂ ಸಂಯುಕ್ತ ಕಾಲೇಜು ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ವಿಜಯವಾಣಿ ಸಂಪಾದಕ ಕೆ.ಎನ್.ಚೆನ್ನೇಗೌಡ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಶಿಕ್ಷಣ ತಜ್ಞ ಡಾ.ವೋಡೇ ಪಿ.ಕೃಷ್ಣ, ಕಸಾಪ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಡಾ.ಧರಣಿದೇವಿ, ಪ್ರತಿಷ್ಠಾನದ ಅಧ್ಯಕ್ಷ ಎಸ್.ಆರ್.ವಿಜಯಸಮರ್ಥ ಮತ್ತಿತರರು ಉಪಸ್ಥಿತರಿದ್ದರು. ಸಮಾರಂಭದಲ್ಲಿ ಸಂಜೀವ ಕಬಕ ಸೇರಿ ವಿವಿಧ ಕ್ಷೇತ್ರಗಳ 40 ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

Leave a Reply

error: Content is protected !!